HEALTH TIPS

ವಾಟ್ಸ್‌ಆಯಪ್ ನಿಷೇಧ ಕೋರಿದ್ದ ಪಿಐಎಲ್‌ ತಿರಸ್ಕರಿಸಿದ ಸುಪ್ರೀಂ ಕೋರ್ಟ್

 ವದೆಹಲಿ: ಐಟಿ ನಿಯಮಗಳನ್ನು ಪಾಲಿಸದ ವಾಟ್ಸ್‌ಆಯ‍ಪ್‌ಗೆ ನಿಷೇಧ ಹೇರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋ‌ರ್ಟ್ ಗುರುವಾರ ತಳ್ಳಿ ಹಾಕಿದೆ.

ನ್ಯಾಯಮೂರ್ತಿಗಳಾದ ಎಂ.ಎಂ ಸುಂದರೇಶ್ ಹಾಗೂ ಅರವಿಂದ ಕುಮಾರ್ ಅವರಿದ್ದ ನ್ಯಾಯ‍ಪೀಠ ಈ ಬಗ್ಗೆ ತೀರ್ಪು ನೀಡಿದೆ.

ಸರ್ಕಾರ ಹೊರಡಿಸಿರುವ ಐಟಿ ನಿಯಮಗಳನ್ನು ವಾಟ್ಸ್‌ಆಯಪ್‌ ಪಾಲಿಸುತ್ತಿಲ್ಲ. ಹೀಗಾಗಿ ಅದನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರ ಓಮನ್‌ಕುಟ್ಟನ್ ಕೆ.ಜಿ. ಎಂಬುವವರು ಕೇರಳ ಹೈಕೋರ್ಟ್‌ನಲ್ಲಿ ದಾವೆ ಹೂಡಿದ್ದರು.

2021ರಲ್ಲಿ ಕೇರಳ ಹೈಕೋರ್ಟ್ ಅದನ್ನು ತಿರಸ್ಕರಿಸಿತ್ತು. ಅಲ್ಲದೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು.

ಆಯಪ್‌ನ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಭದ್ರತೆ ಇರುವುದರಿಂದ ಸಂದೇಶಗಳ ಮೂಲವನ್ನು ಕಂಡುಹಿಡಿಯಲು ಸಾಧ್ಯವಿಲ್ಲ. ಹೀಗಾಗಿ 2021ರ ಐಟಿ ನಿಯಮಗಳಿಗೆ ಒಳಪಡುವುದಿಲ್ಲ ಎಂದು ವಾಟ್ಸ್‌ಆಯಪ್ ದೆಹಲಿ ಹೈಕೋರ್ಟ್‌ಗೆ ನೀಡಿದ ಹೇಳಿಕೆಯನ್ನು ಅರ್ಜಿದಾರರು ಕೇರಳ ಹೈಕೋರ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಇದೇ ವೇಳೆ, ' ಕೆಲವು ಸಂದರ್ಭಗಳಲ್ಲಿ ಬಳಕೆದಾರರು ಕಳುಹಿಸಿದ ಸಂದೇಶಗಳನ್ನು ಸಂಗ್ರಹಿಸಲಾಗುತ್ತದೆ. ಅವರ ಸಂಪರ್ಕಗಳು ಮತ್ತು ಇತರ ಮಾಹಿತಿಯನ್ನು ಪಡೆಯಲಾಗುತ್ತದೆ' ಎನ್ನುವ ವಾಟ್ಸ್‌ಆಯಪ್‌ನ ಗೋಪ್ಯತಾ ನೀತಿಯ ಬಗ್ಗೆಯೂ ಕೋರ್ಟ್ ಗಮನಕ್ಕೆ ತಂದಿದ್ದರು.

ಇದಲ್ಲದೆ, ಆಯಪ್‌ನಲ್ಲಿ ಭದ್ರತೆ ಕೊರತೆಯಿದೆ, ರಾಷ್ಟ್ರ ವಿರೋಧಿ, ಸುಳ್ಳು ಸುದ್ದಿ ಮತ್ತು ಚಿತ್ರಗಳನ್ನು ಹರಡುವ ಸಮಾಜ ವಿರೋಧಿ ಅಂಶಗಳಿಂದ ತುಂಬಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು.

ನ್ಯಾಯಾಲಯದ ಸಮನ್ಸ್ ಮತ್ತು ಕಾನೂನು ನೋಟಿಸ್‌ಗಳನ್ನು ಸಲ್ಲಿಸಲು ವಾಟ್ಸಾಪ್ ನಂತಹ ಸೇವೆಗಳ ಮೇಲೆ ಇಟ್ಟಿರುವ ನಂಬಿಕೆ ಅಪಾಯದಲ್ಲಿದೆ. ಇಂತವುಗಳ ನೈಜತೆ ಖಚಿತಪಡಿಸಿಕೊಳ್ಳಲಾಗುವುದಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು.

ಈ ವಾದಕ್ಕೆ ಮನ್ನಣೆ ಕೊಡದೆ, ಸುಪ್ರೀಂ ಕೋರ್ಟ್ ಅರ್ಜಿಯನ್ನು ತಳ್ಳಿ ಹಾಕಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries