ಜುಲೈನಲ್ಲಿ ಮಾಸ್ಕೋದಲ್ಲಿ ಪುಟಿನ್ರನ್ನು ಭೇಟಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು.
ಕ್ರಮ್ಲಿನ್ ವಕ್ತಾರರೊಬ್ಬರು ಭಾರತದ ರಾಜತಾಂತ್ರಿಕ ಅಧಿಕಾರಿಯೊಬ್ಬರೊಂದಿಗೆ ವಿಡಿಯೊ ಸಂಭಾಷಣೆ ನಡೆಸುವ ವೇಳೆ, ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಗೊಳಿಸಬೇಕಿದೆ. ಪುಟಿನ್ ಅವರ ಯೋಜಿತ ಕಾರ್ಯಕ್ರಮಗಳ ಪಟ್ಟಿಯಲ್ಲಿ ಭಾರತ ಭೇಟಿಯೂ ಸೇರಿದೆ ಎಂದಿದ್ದಾರೆ. ಆದರೆ ಯಾವಾಗ ಭಾರತಕ್ಕೆ ಬರಲಿದ್ದಾರೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ ಎಂದು ವರದಿಯಾಗಿದೆ.