ಉಪ್ಪಳ: ಮಂಗಲ್ಪಾಡಿ ಚೆರುಗೋಳಿ ನಿವಾಸಿ, ಗ್ರಾಮೀಣ ಬ್ಯಾಂಕ್ ನಿವೃತ್ತ ಪ್ರಬಂಧಕ ರಾಮಚಂದ್ರ ಸಿ(70)ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಮನೆಯಲ್ಲಿ ಎದೆನೋವು ಕಾಣಿಸಿಕೊಂಡ ಇವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಸಮಾಜಿಕ, ಧಾರ್ಮಿಕ ಮುಂದಾಳುವಾಗಿದ್ದ ಇವರು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಕಾಸರಗೋಡು ಜಿಲ್ಲಾ ಸಮಿತಿ ಉಪಾಧ್ಯಕ್ಷರಾಘಿದ್ದರು. ಅಂಬಾರು ಶ್ರೀ ಸದಾಶಿವ ದೇವಸ್ಥಾನ, ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಯಾಗಿ ದುಡಿದಿದ್ದರು.ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.