ತಿರುವನಂತಪುರಂ: ಡಿ.10ರಂದು ನಡೆಯಲಿರುವ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆಯಲ್ಲಿ ಮತದಾನ ಮಾಡುವವರ ಎಡಗೈ ಮಧ್ಯದ ಬೆರಳಿಗೆ ಅಳಿಸಲಾಗದ ಶಾಯಿ ಹಚ್ಚಬೇಕು ಎಂದು ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.
ರಾಜ್ಯದಲ್ಲಿ ನ.13 ಮತ್ತು 20ರಂದು ನಡೆದ ಲೋಕಸಭೆ ಹಾಗೂ ವಿಧಾನಸಭೆ ಉಪಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರರ ಎಡಗೈ ತೋರು ಬೆರಳಿನ ಶಾಯಿ ಗುರುತು ಸಂಪೂರ್ಣವಾಗಿ ಅಳಿಸಿ ಹೋಗುವ ಸಾಧ್ಯತೆ ಇಲ್ಲದ ಕಾರಣ ಈ ಆದೇಶ ನೀಡಲಾಗಿದೆ.
ಡಿಸೆಂಬರ್ 10 ರಂದು ನಡೆಯುವ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಮತ ಚಲಾಯಿಸಲು ಬರುವವರ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಮತಗಟ್ಟೆ ಅಧಿಕಾರಿಗಳಿಗೆ ಸಹಾಯ ಮಾಡಲು ಈ ಕ್ರಮ ನೆರವಾಗಲಿದೆ.
ಈ ವಿಧಾನ ಈಗ ನಡೆಯುತ್ತಿರುವ ಉಪಚುನಾವಣೆಗೆ ಮಾತ್ರ. ರಾಜ್ಯದ 31 ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳಿಗೆ ಡಿಸೆಂಬರ್ 10 ರಂದು ಉಪಚುನಾವಣೆ ನಡೆಯಲಿದೆ.