ತಿರುವನಂತಪುರ: ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಎರಡನೇ ಹಂತದ ಮೆಡಿಸೆಪ್ ಆರೋಗ್ಯ ವಿಮೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಜಾರಿಗೆ ತರಲು ನಿರ್ಧರಿಸಲಾಗಿದೆ.
ಹೊಸ ವೈದ್ಯಕೀಯ ಮತ್ತು ಶಸ್ತ್ರಚಿಕಿತ್ಸಾ ಪ್ಯಾಕೇಜ್‍ಗಳು ಮತ್ತು ದರಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ನೇಮಿಸಲಾಗಿದೆ. ಪ್ರಸ್ತಾವನೆಗಳನ್ನು ಸಲ್ಲಿಸಲು ಶ್ರೀರಾಮ್ ವೆಂಕಟರಾಮನ್ ನೇತೃತ್ವದ ಐವರು ಸದಸ್ಯರ ಸಮಿತಿಯನ್ನು ನೇಮಿಸಲಾಗಿದೆ.
ಯೋಜನೆಯ ಮೊದಲ ಹಂತದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಇದಾದ ನಂತರ ಸುಧಾರಣೆಯೊಂದಿಗೆ ಎರಡನೇ ಹಂತದ ವಿಮಾ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಪ್ರಸ್ತುತ ಪಾಲಿಸಿಯು ಮುಂದಿನ ವರ್ಷ ಜೂನ್ 30 ರಂದು ಮುಕ್ತಾಯಗೊಳ್ಳಲಿರುವುದರಿಂದ ಯೋಜನೆಯನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರವು ಜುಲೈ 1, 2022 ರಂದು ಯೋಜನೆಯನ್ನು ಪ್ರಾರಂಭಿಸಿತ್ತು.
ಈ ಯೋಜನೆಯ ಮೂಲಕ ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಕುಟುಂಬದ ಸದಸ್ಯರು ಸೇರಿದಂತೆ 30 ಲಕ್ಷ ಜನರಿಗೆ ಉಚಿತ ತಜ್ಞ ಚಿಕಿತ್ಸೆ ದೊರೆಯಲಿದೆ ಎಂದು ಘೋಷಿಸಲಾಗಿತ್ತು. ಆದರೆ ನಂತರ ಯೋಜನೆ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಆಸ್ಪತ್ರೆಗಳು ಮತ್ತು ವಿಮಾ ಕಂಪನಿಗಳು ದೂರುಗಳೊಂದಿಗೆ ರಂಗಕ್ಕೆ ಬಂದವು. ತರುವಾಯ, ಯೋಜನೆಯನ್ನು ಹೇಗೆ ಪರಿಷ್ಕರಿಸಬಹುದು ಮತ್ತು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಬಹುದು ಎಂಬುದನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸಲಾಗಿದೆ.