ಮೋತಿಹಾರಿ : ಪ್ರಕರಣವೊಂದರ ತನಿಖೆಗೆ ತೆರಳಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೋತಿಹಾರಿ : ಪ್ರಕರಣವೊಂದರ ತನಿಖೆಗೆ ತೆರಳಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.
'ಅಪಹರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸೋನು ಕುಮಾರ್ ಮತ್ತು ಮುನ್ನಾ ಕುಮಾರ್ ಪಾಸ್ವಾನ್ ಎಂಬ ಪೊಲೀಸರು ಶುಕ್ರವಾರ ಬೆಳಗ್ಗೆ ಪಹರ್‌ಪುರ ಗ್ರಾಮಕ್ಕೆ ತಲುಪಿದ್ದಾರೆ. ಈ ವೇಳೆ ಅಲ್ಲಿನ ನಿವಾಸಿ ಶಂಭು ಪ್ರಸಾದ್ ಅವರ ಮಗ, ಅವರು ಇದ್ದಕ್ಕಿದ್ದಂತೆ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ' ಎಂದು ಎಸ್‌ಪಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
'ಪೊಲೀಸರಿಗೆ ರಾಡ್ ಮತ್ತು ದೊಣ್ಣೆಗಳಿಂದ ಥಳಿಸಿದ್ದಾರೆ. ಘಟನೆಯಲ್ಲಿ ಇನ್ಸ್ ಪೆಕ್ಟರ್ ಸೋನು ಕುಮಾರ್ ತಲೆಗೆ ಗಾಯವಾಗಿದ್ದು, ಹೋಮ್ ಗಾರ್ಡ್ ಸಿಬ್ಬಂದಿ ಮುನ್ನಾ ಪಾಸ್ವಾನ್ ಅವರಿಗೂ ಗಂಭೀರ ಗಾಯಗಳಾಗಿವೆ' ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ಬಳಿಕ ಸ್ಥಳೀಯ ಪೊಲೀಸರು ಗ್ರಾಮಕ್ಕೆ ಆಗಮಿಸಿ ಅವರನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಪಹಾರ್ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಅವರ ವೇತನ ತಡೆಹಿಡಿದು ಇಲಾಖೆಯ ತನಿಖೆಗೆ ಒಳಪಡಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚಿಸಿದ್ದಾರೆ.
ಗಾಯಗೊಂಡ ಪೊಲೀಸರನ್ನು ರಕ್ಷಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಕಳುಹಿಸುವಲ್ಲಿ ನಿಷ್ಕ್ರಿಯತೆ ತೋರಿದ ಆರೋಪದ ಮೇಲೆ ಉಪವಿಭಾಗೀಯ ಪೊಲೀಸ್ ಅಧಿಕಾರಿ ಮತ್ತು ಅರೆರಾಜ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಅವರಿಂದ ವಿವರಣೆಯನ್ನು ಸಹ ವರಿಷ್ಠಾಧಿಕಾರಿ ಕಚೇರಿ ಕೇಳಿದೆ.