ವಯನಾಡ್: ಬಿಜೆಪಿ ಮತ್ತು ಅದರ ನಾಯಕ ನರೇಂದ್ರ ಮೋದಿ ಅವರು ಸಂವಿಧಾನದ ಮೌಲ್ಯಗಳಾದ ಸಮಾನತೆ, ನ್ಯಾಯ ಮತ್ತು ಜಾತ್ಯತೀತತೆಯನ್ನು ನಾಶ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ವಯನಾಡ್ ಲೋಕಸಭಾ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಆರೋಪಿಸಿದರು.

ಉಪಚುನಾವಣೆಯ ಪ್ರಚಾರದ ಭಾಗವಾಗಿ ಮಲಪ್ಪುರ ಜಿಲ್ಲೆಯ ಚೆರುಕೋಡ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
'ಕಳೆದ 10 ವರ್ಷಗಳಲ್ಲಿ ಬಿಜೆಪಿಯು ದೇಶದಲ್ಲಿ ವಿಭಜನೆಯ ರಾಜಕಾರಣವನ್ನು ಮಾಡುತ್ತಿದೆ. ಅಧಿಕಾರವನ್ನು ಉಳಿಸಿಕೊಳ್ಳಲು ಜನರು ನೈಜ ಸಮಸ್ಯೆಗಳತ್ತ ಗಮನಹರಿಸದಂತೆ ಮಾಡುತ್ತಿದೆ. ಇಂತಹ ರಾಜಕಾರಣ ದೇಶದಲ್ಲಿ ಪ್ರಬಲವಾಗಿದೆ. ಜನರ ದೈನಂದಿನ ಸಮಸ್ಯೆಗಳ ಪರಿಹರಿಸುವ ಬಗ್ಗೆ ಸರ್ಕಾರ ಗಮನ ಹರಿಸುತ್ತಿಲ್ಲ' ಎಂದು ಆರೋಪಿಸಿದರು.
'ಬಿಜೆಪಿ ಆಡಳಿತದಲ್ಲಿ ರೈತರು ಅಥವಾ ಮಧ್ಯಮ ಮತ್ತು ಸಣ್ಣ ಉದ್ಯಮಗಳಿಗೆ ಸಹಕಾರ ಸಿಗುತ್ತಿಲ್ಲ. ಮಧ್ಯಮ ಮತ್ತು ಸಣ್ಣ ಉದ್ಯಮಗಳು ದೇಶದ ಆರ್ಥಿಕತೆಯ ಬೆನ್ನೆಲುಬು. ಅವುಗಳು ಉದ್ಯೋಗವನ್ನು ಸೃಷ್ಟಿಸುತ್ತಿವೆ. ಹಾಗಾಗಿ ಅದಕ್ಕೆ ಸೂಕ್ತ ಸಹಕಾರ ಅಗತ್ಯ' ಎಂದರು.