ಬದಿಯಡ್ಕ: ಕಾಸರಗೋಡು ಜಿಲ್ಲೆಯ ವಿವಿಧೆಡೆಗಳಲ್ಲಿ ದುಷ್ಕøತ್ಯಗಳು ನಡೆಯುತ್ತಿದ್ದು ರಾಜ್ಯದ ಗೃಹ ಇಲಾಖೆ, ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸುತ್ತಿದೆ. ವಿವಿಧ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ಚರ್ಚ್‍ಗಳಲ್ಲಿ ಕಳ್ಳತನ ಕೃತ್ಯ ವ್ಯಾಪಕಗೊಂಡಿದೆ. ಆದರೆ ಕಳ್ಳರನ್ನು ಪತ್ತೆಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಬಿಜೆಪಿ ಬದಿಯಡ್ಕ ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ ಆರೋಪಿಸಿದ್ದಾರೆ.
ಬೋವಿಕ್ಕಾನದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ಕಾರನ್ನು ತಡೆದು ಹಲ್ಲೆಗೆತ್ನಿಸಿದ ಕೃತ್ಯವನ್ನು ಅವರು ಕಟು ಶಬ್ದಗಳಿಂದ ಖಂಡಿಸಿದ್ದಾರೆ. ಈ ಕೃತ್ಯದ ಹಿಂದೆ ಮತಾಂಧ ಶಕ್ತಿಗಳ ಕೈವಾಡವಿದೆಯೆಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ನ್ಯಾಯ ಒದಗಿಸುವ ಬದಲು ಪೊಲೀಸ್ ಇಲಾಖೆಯು ಹೊಣೆಗೇಡಿ ವರ್ತನೆ ತೋರುತ್ತಿದ್ದು ಎಡರಂಗ ಸರ್ಕಾರದ ಬೇಜವಾಬ್ದಾರಿತನವೇ ಇದಕ್ಕೆ ಸಾಕ್ಷಿಯಾಗಿದೆಯೆಂದು ಅವರು ತಿಳಿಸಿದ್ದಾರೆ. ಬಿಜೆಪಿ ಮಂಡಲ ಸಮಿತಿಯು ಈ ನಿಟ್ಟಿನಲ್ಲಿ ಪ್ರಬಲ ಹೋರಾಟಗಳನ್ನು ಕೈಗೆತ್ತಿಕೊಳ್ಳಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.