ಪೆರ್ಲ: ಪೆರ್ಲ ನಾಲಂದ ಕಾಲೇಜಿನ ಎನ್ನೆಸ್ಸೆಸ್ ಘಟಕ, ನಾಲಂದ ಚಾರಿಟೇಬಲ್ ಟ್ರಸ್ಟ್ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.
ಎಣ್ಮಕಜೆ ಗ್ರಾಪಂ ಸದಸ್ಯೆ ರೂಪವಾಣಿ ಆರ್.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ವಕೀಲ ಮುನ್ನಾವರ್ ತಬ್ಷೀರ್ ಸಂಪನ್ಮೂಲ ವ್ಯಕ್ತಿಯಾಗಿ ಬಾಗವಹಿಸಿ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಪ್ರಿನ್ಸಿಪಾಲ್ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸ್ವಾಗತಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಾರ್ವಜನಿಕ ಕಾನೂನು ಸ್ವಯಂ ಸೇವಕ ಶಂಕರನ್ ಸಿ.ಎಚ್.ವಂದಿಸಿದರು. ಸಹಾಯಕ ಯೋಜನಾಧಿಕಾರಿ ಭವ್ಯ ಬಿ. ಕಾರ್ಯಕ್ರಮ ನಿರೂಪಿಸಿದರು.