ಕಾಸರಗೋಡು: ಮಾರಕ ಎಂಡಿಎಂಎ ಸಾಗಾಟ ಪ್ರಕರಣದ ಅಪರಾಧಿ, ಕಾಸರಗೋಡು ಎರಿಯಾಲ್ ಚೇರಂಗೈ ನಿವಾಸಿ ಮುಹಮ್ಮದ್ ಮರ್ಶೂಕ್ ಎಂಬಾತನಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ(ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಅಪರಾಧಿ ಮೂರು ತಿಂಗಳ ಹೆಚ್ಚಿನ ಜೈಲು ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಲಾಗಿದೆ.
2022 ಡಿ. 26ರಂದು ಕಾಸರಗೋಡು ರೈಲ್ವೆ ನಿಲ್ದಾಣ ವಠಾರದಲ್ಲಿ ನಗರಠಾಣೆಯ ಅಂದಿನ ಇನ್ಸ್‍ಪೆಕ್ಟರ್ ಪಿ. ಅಜಿತ್‍ಕುಮಾರ್ ಕಾರ್ಯಾಚರಣೆ ನಡೆಸಿ ಮುಹಮ್ಮದ್ ಮರ್ಶೂಕ್‍ನನ್ನು ಬಂಧಿಸಿ, ಈತನಿಂದ 48ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿತ್ತು.