ವಯನಾಡ್: ವಯನಾಡ್ ನಲ್ಲಿ ಆಹಾರ ಪೊಟ್ಟಣಗಳ ಮೇಲೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರ ಭಾವಚಿತ್ರಗಳನ್ನು ಮುದ್ರಿಸಿರುವುದರ ಸಂಬಂಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 173 ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯನ್ವಯ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪದಾಧಿಕಾರಿಗಳು, ಈ ಆಹಾರ ಪೊಟ್ಟಣಗಳನ್ನು ಜುಲೈ 30ರಂದು ಸಂಭವಿಸಿದ ಭೂಕುಸಿತದಲ್ಲಿ ಬದುಕುಳಿದವರಿಗಾಗಿ ಮೀಸಲಿರಿಸಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ. ಆದರೆ, ಉಪ ಚುನಾವಣೆಗೂ ಮುನ್ನ ಮತದಾರರ ಮೇಲೆ ಪ್ರಭಾವ ಬೀರಲು ಈ ಆಹಾರ ಪೊಟ್ಟಣಗಳನ್ನು ವಿತರಿಸಲಾಗುತ್ತಿತ್ತು ಎಂದು ಆಡಳಿತಾರೂಢ ಎಡರಂಗ ಆರೋಪಿಸಿದೆ. ಸ್ಥಳೀಯ ಕಾಂಗ್ರೆಸ್ ನಾಯಕರೊಬ್ಬರ ನಿವಾಸದ ಬಳಿಯಿರುವ ಹಿಟ್ಟಿನ ಗಿರಣಿಯಲ್ಲಿ ಈ ಆಹಾರ ಪೊಟ್ಟಣಗಳು ಕಂಡು ಬಂದಿದ್ದವು. ಈ ಆಹಾರ ಪೊಟ್ಟಣಗಳು ಟೀ ಪುಡಿ, ಸಕ್ಕರೆ ಹಾಗೂ ಅಕ್ಕಿಯಂತಹ ಆಹಾರ ಪದಾರ್ಥಗಳನ್ನು ಹೊಂದಿದ್ದವು.
ಪಿಟಿಐ ಮೂಲಗಳ ಪ್ರಕಾರ, ಈ ಆಹಾರ ಪೊಟ್ಟಣಗಳ ಮೇಲೆ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಚಿತ್ರಗಳಲ್ಲದೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಭಾವಚಿತ್ರಗಳೂ ಕಂಡು ಬಂದಿವೆ ಎನ್ನಲಾಗಿದೆ.
ಈ ಆಹಾರ ಪೊಟ್ಟಣಗಳನ್ನು
ವಯನಾಡ್ ಲೋಕಸಭಾ ಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಪ್ರಿಯಾಂಕಾ ಗಾಂಧಿ, ಸಿಪಿಐನ ಸತ್ಯನ್ ಮೊಕೇರಿ ಹಾಗೂ ಬಿಜೆಪಿಯ ನವ್ಯಾ ಹರಿದಾಸ್ ಅವರನ್ನು ಎದುರಿಸುತ್ತಿದ್ದಾರೆ.
ಈ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಯ್ ಬರೇಲಿ ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳೆರಡರಿಂದಲೂ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡ್ ಲೋಕಸಭಾ ಕ್ಷೇತ್ರವನ್ನು ತೆರವುಗೊಳಿಸಿದ್ದರಿಂದ, ಈ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ.