HEALTH TIPS

ಪಾಕ್‌: ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಬಾಂಬ್‌ ಸ್ಫೋಟದ ವಿಡಿಯೊಗಳು...

 ಪೇಶಾವರ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ 25 ಮಂದಿ ಸಾವಿಗೀಡಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.


ಜಾಫರ್ ಎಕ್ಸ್‌ಪ್ರೆಸ್‌ ರೈಲು ಫ್ಲಾಟ್‌ಫಾರಂಗೆ ಆಗಮಿಸುವುದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆ ಸುಮಾರಿಗೆ ನಿಲ್ದಾಣದ ಬುಕ್ಕಿಂಗ್ ಕಚೇರಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪಾಕಿಸ್ತಾನದ ಪೊಲೀಸ್‌ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ನಿಲ್ದಾಣದಲ್ಲಿರುವ ಸಿಸಿಕ್ಯಾಮೆರಾದಲ್ಲಿ ಸ್ಫೋಟದ ದೃಶ್ಯ ಸೆರೆಯಾಗಿದೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries