ನವದೆಹಲಿ: ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಮತ್ತು ಅರ್ಥಶಾಸ್ತ್ರಜ್ಞ ಬಿಬೇಕ್ ಡೆಬ್ರಾಯ್ (69) ಇಂದು ನಿಧನರಾದರು.
ಕರುಳಿಗೆ ಸಂಬಂಧಿಸಿದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಬೇಕ್ ಅವರು ಇಂದು ಬೆಳಿಗ್ಗೆ 7 ಗಂಟೆಗೆ ನಿಧನರಾದರು ಎಂದು ದೆಹಲಿಯ ಏಮ್ಸ್ ತಿಳಿಸಿದೆ.
ಬಿಬೇಕ್ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, 'ಬಿಬೇಕ್ ಅವರು ಅರ್ಥಶಾಸ್ತ್ರ, ಇತಿಹಾಸ, ಸಂಸ್ಕೃತಿ, ರಾಜಕೀಯ, ಆಧ್ಯಾತ್ಮಿಕತೆ ಹೀಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಪರಿಣಿತರಾಗಿದ್ದರು. ಅವರ ಕೃತಿಗಳ ಮೂಲಕ ಭಾರತ ಮರೆಯದಂತ ಕೊಡುಗೆ ನೀಡಿದ್ದಾರೆ. ಸಾರ್ವಜನಿಕ ನೀತಿಗೆ ನೀಡಿದ ಕೊಡುಗೆಯ ಹೊರತಾಗಿ ಅವರು ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಕೆಲಸ ಮಾಡುವುದನ್ನು ಇಷ್ಟಪಡುತ್ತಿದ್ದರು. ಈ ಮೂಲಕ ಯುವ ಜನತೆ ಪ್ರಾಚೀನ ಗ್ರಂಥಗಳ ಅಧ್ಯಯನಕ್ಕೆ ಬರುವಂತೆ ಪ್ರೋತ್ಸಾಹಿಸಿದರು' ಎಂದಿದ್ದಾರೆ.
'ನಾನು ಬಿಬೇಕ್ ಅವರನ್ನು ಹಲವು ವರ್ಷಗಳಿಂದ ಬಲ್ಲೆ. ಅವರ ಒಳನೋಟಗಳು ಮತ್ತು ಶೈಕ್ಷಣಿಕ ಪ್ರವಚನದ ಉತ್ಸಾಹವನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪ ಸೂಚಿಸುತ್ತೇನೆ' ಎಂದಿರುವ ಮೋದಿ, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬಿಬೆಕ್ ಅವರೊಂದಿಗಿನ ಫೋಟೊಗಳನ್ನು ಹಂಚಿಕೊಂಡಿದ್ದಾರೆ.