HEALTH TIPS

ತಿರುಪತಿ ಲಾಡು ಪ್ರಕರಣ: CBI ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

       ವದೆಹಲಿ: ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

       ಸಾಮಾಜಿಕ ಕಾರ್ಯಕರ್ತ ಮತ್ತು 'ಗ್ಲೋಬಲ್ ಪೀಸ್‌ ಇನಿಷಿಯೇಟಿವ್‌'ನ ಅಧ್ಯಕ್ಷ ಕೆ.ಎ.ಪೌಲ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿ ಬಿ.ಆರ್‌.

ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು ನಿರಾಕರಿಸಿದೆ.

'ನಿಮ್ಮ ಮನವಿಯನ್ನು ಪರಿಗಣಿಸಿದರೆ ದೇವಸ್ಥಾನ ಮತ್ತು ಗುರುದ್ವಾರಗಳಿಗೆ ಪ್ರತ್ಯೇಕ ರಾಜ್ಯವನ್ನು ರಚಿಸಬೇಕಾಗುತ್ತದೆ. ಒಂದು ಧರ್ಮಕ್ಕಾಗಿ ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ' ಎಂದು ಪೀಠ ತಿಳಿಸಿದೆ.


          'ತಿರುಪತಿ ದೇಗುಲವು ಹಿಂದೂಗಳ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು. ಪ್ರಸಾದದಲ್ಲಿ ಕಲಬೆರಕೆ ಮಾಡುವುದು ಭಕ್ತರ ಭಾವನೆಗಳಿಗೆ ಘಾಸಿ ಉಂಟು ಮಾಡುತ್ತದೆ. ಅಲ್ಲದೆ ದೇಗುಲದ ಘನತೆಗೂ ಧಕ್ಕೆ ತರುತ್ತದೆ. ಸಾಂಪ್ರದಾಯಿಕ ವಿಚಾರಗಳಲ್ಲಿ ರಾಜಕೀಯ ಮತ್ತು ಭ್ರಷ್ಟಾಚಾರ ನುಸುಳುವುದನ್ನು ತಡೆಯಲು ಮತ್ತು ಭಕ್ತರ ಹಿತದೃಷ್ಟಿಯಿಂದ ಈ ಅರ್ಜಿಯನ್ನು ಸಲ್ಲಿಸಿದ್ದೇವೆ' ಎಂದು ಅರ್ಜಿದಾರರು ತಿಳಿಸಿದ್ದಾರೆ.

           ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಅವರ ಅವಧಿಯಲ್ಲಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಅ.4ರಂದು ಸ್ವತಂತ್ರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ.

ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.

ಜನಪರ,  ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ

ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.

ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.

ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.


ಇದು ಗಡಿನಾಡು ಕಾಸರಗೋಡಿನ ಜನಧ್ವನಿ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries