ಮುಂಬೈ: ಮಹಾ ವಿಕಾಸ್ ಅಘಾಡಿ(ಎಂವಿಎ)ಯ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷದ ಎಲ್ಲಾ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತಲ ಗುರುವಾರ ತಿಳಿಸಿದರು.
ಮುಂಬೈ: ಮಹಾ ವಿಕಾಸ್ ಅಘಾಡಿ(ಎಂವಿಎ)ಯ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷದ ಎಲ್ಲಾ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತಲ ಗುರುವಾರ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚೆನ್ನಿತಲ, ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಇನ್ನೂ ಕಣದಲ್ಲಿರುವ ಬಂಡಾಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ನೋಟಿಸ್ ನೀಡುವಂತೆ ಜಿಲ್ಲಾ ಘಟಕಗಳಿಗೆ ಸೂಚಿಸಲಾಗಿದೆ ಅವರು ಹೇಳಿದರು.
ವಿರೋಧ ಪಕ್ಷಗಳ ಮೈತ್ರಿ ಸರ್ಕಾರವಾದ ಎಂವಿಎಯಲ್ಲಿ ಕಾಂಗ್ರೆಸ್, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ(ಯುಬಿಟಿ) ಮತ್ತು ಶರದ್ ಪವಾರ್ ಅವರ ಎನ್‌ಸಿಪಿ (ಎಸ್‌ಪಿ) ಸೇರಿವೆ.
ನವೆಂಬರ್ 10ರಂದು ಎಂವಿಎ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಚೆನ್ನಿತಲ ತಿಳಿಸಿದರು.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಇತರ ಹಿರಿಯ ಕಾಂಗ್ರೆಸ್ ನಾಯಕರು, ಕರ್ನಾಟಕ ಹಾಗೂ ತೆಲಂಗಾಣದ ಮುಖ್ಯಮಂತ್ರಿಗಳು ಎಂವಿಎ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ ಎಂದು ಅವರು ಹೇಳಿದರು.