HEALTH TIPS

ಸಾರ್ವಜನಿಕ ಜಾಗಗಳಲ್ಲಿ ಅಂಗವಿಕಲರ ಪ್ರವೇಶ ಸರಳಗೊಳಿಸಲು ಕ್ರಮಕ್ಕೆ SC ನಿರ್ದೇಶನ

        ವದೆಹಲಿ: ಸಾರ್ವಜನಿಕ ಸ್ಥಳಗಳಿಗೆ ಅಂಗವಿಕಲರು ಸುಲಭವಾಗಿ ಪ್ರವೇಶಿಸುವಂತಾಗಬೇಕು. ಈ ಉದ್ಧೇಶಕ್ಕಾಗಿ ರೂಪಿಸಿರುವ 'ಕಡ್ಡಾಯ ಮಾನದಂಡ'ಗಳನ್ನು ಮೂರು ತಿಂಗಳ ಒಳಗಾಗಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ.

      ಈ ಮಾನದಂಡಗಳನ್ನು ಜಾರಿಗೊಳಿಸುವಂತೆ 2017ರ ಡಿಸೆಂಬರ್‌ 15ರಂದು ತೀರ್ಪು ನೀಡಿದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿತ್ತು.

       ಆದರೆ, ಅನುಷ್ಠಾನವು ನಿಧಾನಗತಿಯಲ್ಲಿ ಆಗುತ್ತಿದೆ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್‌ ಮತ್ತೊಮ್ಮೆ ನಿರ್ದೇಶನ ನೀಡಿದೆ.

        ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್‌ ಮಿಶ್ರಾ ಅವರು ಪೀಠದಲ್ಲಿದ್ದರು.

        'ಸಾರ್ವಜನಿಕ ಸ್ಥಳಗಳಿಗೆ ಅಂಗವಿಕಲರಿಗೆ ಸುಲಭವಾಗಿ ಪ್ರವೇಶ ಸಿಗುವಂತಾಗಬೇಕು. ಇದಕ್ಕಾಗಿ ಎರಡು ಬಗೆಯ ವಿಧಾನ ಅನುಸರಿಸಬೇಕು. ಮೊದಲನೆಯದಾಗಿ ಈಗಿರುವ ಮೂಲಸೌಕರ್ಯಗಳು ಮಾನದಂಡಗಳಿಗೆ ಅನುಗುಣವಾಗಿ ಇರಬೇಕು. ಎರಡನೆದಾಗಿ ಹೊಸದಾಗಿ ಒದಗಿಸುವ ಮೂಲಸೌಕರ್ಯಗಳು ಅಂಗವಿಕಲರಿಗೂ ಅನುಕೂಲವಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು' ಎಂದು ಪೀಠ ಸೂಚಿಸಿದೆ.

           ಅಂಗವಿಕಲರಿಗಾಗಿ ಹೊಸ ಮಾನದಂಡಗಳನ್ನು ರೂಪಿಸುವ ಕಾರ್ಯದಲ್ಲಿ ಕೇಂದ್ರ ಸರ್ಕಾರಕ್ಕೆ ನೆರವು ನೀಡುವ ಜವಾಬ್ಧಾರಿಯನ್ನು ಹೈದರಾಬಾದ್‌ನ ಎನ್‌ಎಎಲ್‌ಎಸ್‌ಎಆರ್‌ ಕಾನೂನು ವಿಶ್ವವಿದ್ಯಾಲಯದ ಅಂಗವೈಕಲ್ಯ ಅಧ್ಯಯನ ಕೇಂದ್ರಕ್ಕೆ ಪೀಠ ವಹಿಸಿದೆ.

           ಈ ಸಂಬಂಧ ರಾಜೀವ್ ರತೂರಿ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಪೀಠವು ಮುಂದಿನ ಮಾರ್ಚ್‌ 7ಕ್ಕೆ ಮುಂದೂಡಿತು.

ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.

ಜನಪರ,  ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ

ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.

ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.

ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.


ಇದು ಗಡಿನಾಡು ಕಾಸರಗೋಡಿನ ಜನಧ್ವನಿ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries