HEALTH TIPS

ಯಾವುದೇ ಧರ್ಮ ಮಾಲಿನ್ಯವನ್ನು ಉತ್ತೇಜಿಸುವುದಿಲ್ಲ: ಪಟಾಕಿ ನಿಷೇಧದ ಬಗ್ಗೆ SC

 ವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ನಿಷೇಧವನ್ನು ಸಮಗ್ರವಾಗಿ ಜಾರಿಗೊಳಿಸಲು ವಿಫಲರಾಗಿರುವ ಪೊಲೀಸರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ ಮತ್ತು ಅಗಸ್ಟಿನ್‌ ಜಾರ್ಜ್‌ ಮಾಸಿಹ್‌ ಅವರ ಪೀಠವು ದೆಹಲಿ ಪೊಲೀಸ್ ಕಮಿಷನರ್‌ಗೆ ತಕ್ಷಣವೇ ಪಟಾಕಿ ನಿಷೇಧ ಆದೇಶದ ಬಗ್ಗೆ ಸಂಬಂಧಿಸಿದ ಎಲ್ಲಾ ಪಟಾಕಿ ತಯಾರಕರಿಗೆ ತಿಳಿಸಲು ಮತ್ತು ಪಟಾಕಿಗಳ ಮಾರಾಟ ಹಾಗೂ ತಯಾರಿಕೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಿದೆ.

ಪಟಾಕಿಗಳ ಮೇಲಿನ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ವಿಶೇಷ ಘಟಕವೊಂದನ್ನು ತೆರೆಯುವಂತೆ ನಾವು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುತ್ತೇವೆ. ಜತೆಗೆ, ಪಟಾಕಿ ನಿಷೇಧವನ್ನು ಜಾರಿಗೊಳಿಸಲು ತೆಗೆದುಕೊಂಡ ಕ್ರಮಗಳನ್ನು ದಾಖಲಿಸುವ ಮೂಲಕ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸುವಂತೆಯೂ ನಿರ್ದೇಶಿಸುತ್ತೇವೆ ಎಂದೂ ನ್ಯಾಯಪೀಠ ಹೇಳಿದೆ.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಮಾಲಿನ್ಯ ಮುಕ್ತ ವಾತಾವರಣದಲ್ಲಿ ಬದುಕುವ ಹಕ್ಕು ಎಲ್ಲರಿಗೂ ಇದೆ. ಯಾವುದೇ ಧರ್ಮವು ಮಾಲಿನ್ಯವನ್ನು ಉತ್ತೇಜಿಸುವ ಅಥವಾ ಜನರ ಆರೋಗ್ಯದೊಂದಿಗೆ ರಾಜಿ ಮಾಡಿಕೊಳ್ಳುವ ಯಾವುದೇ ಚಟುವಟಿಕೆಯನ್ನು ಉತ್ತೇಜಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಪೀಠ ತಿಳಿಸಿದೆ.

ನವೆಂಬರ್ 25ರೊಳಗೆ ಪಟಾಕಿ ತಯಾರಕೆದಾರರೊಂದಿಗೆ ಚರ್ಚೆ ನಡೆಸಿ ಶಾಶ್ವತ ಪಟಾಕಿ ನಿಷೇಧದ ಬಗ್ಗೆ ನಿರ್ಧರಿಸುವಂತೆ ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries