ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
Wayanad Bypoll: ಮಧ್ಯಾಹ್ನ 3ರ ವರೆಗೆ ಶೇ 51ರಷ್ಟು ಮತದಾನ
0
ನವೆಂಬರ್ 13, 2024
Tags
ವಯನಾಡ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಚುನಾವಣಾ ರಾಜಕೀಯಕ್ಕೆ ಪದಾರ್ಪಣೆ ಮಾಡಿರುವ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
ಮಧ್ಯಾಹ್ನ 3ರ ವರೆಗೆ ಶೇ 51 ರಷ್ಟು ಜನರು ಮತದಾನ ಮಾಡಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮತಗಟ್ಟೆಗಳಲ್ಲಿ ಜನ ಸಾಲುಗಟ್ಟಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ. 1,354 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, 14 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾಯಿಸಲು ನೋಂದಾಯಿಸಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ಈ ಕ್ಷೇತ್ರ ತೆರವಾಗಿತ್ತು. 2024ರ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸಿದ್ದ ರಾಹುಲ್, ಎರಡೂ ಕಡೆ ಗೆಲುವು ಸಾಧಿಸಿದ್ದರು. ಬಳಿಕ ರಾಯ್‌ಬರೇಲಿಯನ್ನು ಉಳಿಸಿಕೊಂಡಿದ್ದರು.