HEALTH TIPS

'ಸನ್ನಿ ಲಿಯೋನ್' ಹೆಸರಿನಲ್ಲಿ ಸರ್ಕಾರದಿಂದ ಮಾಸಿಕ ₹1000 ಪಡೆಯುತ್ತಿದ್ದ ವ್ಯಕ್ತಿ!

 ರಾಯಪುರ: 'ಸನ್ನಿ ಲಿಯೋನ್' ಹೆಸರಿನಲ್ಲಿ ನಕಲಿ ಖಾತೆಯೊಂದನ್ನು ತೆರೆಯುವ ಮೂಲಕ ವ್ಯಕ್ತಿಯೊಬ್ಬ ಛತ್ತೀಸಗಢ ಸರ್ಕಾರ ವಿವಾಹಿತ ಮಹಿಳೆಯರಿಗಾಗಿ ತಂದಿರುವ 'ಮಹತಾರಿ ವಂದನಾ ಯೋಜನೆ'ಯ ಲಾಭ ಪಡೆದುಕೊಂಡಿರುವುದು ಇದೀಗ ಬೆಳಕಿಗೆ ಬಂದಿದೆ.

ಈ ಯೋಜನೆಯಡಿಯಲ್ಲಿ ವಿವಾಹಿತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಸರ್ಕಾರ ₹1 ಸಾವಿರ ಮೊತ್ತವನ್ನು ಜಮಾ ಮಾಡುತ್ತಿದೆ.

ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೀರೇಂದ್ರ ಜೋಶಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯೋಜನೆಯ ಅರ್ಹ ಫಲಾನುಭವಿಗಳ ಪರಿಶೀಲನೆಯ ಜವಾಬ್ದಾರಿ ಹೊಂದಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಡಳಿತ ವಂಚನೆ ಬಗ್ಗೆ ತನಿಖೆ ಆರಂಭಿಸಿದೆ. ಛತ್ತೀಸಗಢದ ಬಸ್ತಾರ್ ಜಿಲ್ಲೆಯ ತಾಲೂರ್ ಗ್ರಾಮದಲ್ಲಿ ವಂಚನೆ ನಡೆದಿರುವುದು ವರದಿಯಾಗಿದ್ದು, ಈ ಬಗ್ಗೆ ಆಳವಾದ ತನಿಖೆ ನಡೆಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಜಿಲ್ಲಾಧಿಕಾರಿ ಹ್ಯಾರಿಸ್‌ ಎಸ್. ಆದೇಶಿಸಿದ್ದಾರೆ.

ಈ ಸಂಗತಿಯು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಮಹತಾರಿ ವಂದನಾ ಯೋಜನೆಯಡಿ ಶೇ 50ರಷ್ಟು ಫಲಾನುಭವಿಗಳು ನಕಲಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ದೀಪಕ್ ಬೈಜ್ ಆರೋಪಿಸಿದ್ದು, ಈ ಆರೋಪವನ್ನು ಬಿಜೆಪಿ ಅಲ್ಲಗೆಳೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries