ಕಾಸರಗೋಡು: ಜಿಲ್ಲಾ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕಛೇರಿ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ವಾರ್ತಾ ಇಲಾಖೆ ಜಂಟಿಯಾಗಿ ಡಿಸೆಂಬರ್ 10 ರಂದು ಪರಿಶಿಷ್ಟ ಪಂಗಡದವರಿಗೆ ಮಾಧ್ಯಮ ಕಾರ್ಯಾಗಾರ ಡಿ. 10ರಂದು ಬೆಳಗ್ಗೆ 10ಕ್ಕೆ ಸಿವಿಲ್ ಸ್ಟೇಶನ್‍ನ ವಾರ್ತಾ ಇಲಾಖೆ ಪಿ.ಆರ್ ಚೇಂಬರ್‍ನಲ್ಲಿ ಜರುಗಲಿದೆ.
ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಕಾರ್ಯಾಗಾರ ಉದ್ಘಾಟಿಸುವರು. ಕಾಸರಗೋಡು ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಮೋಹನ್ ದಾಸ್ ಅಧ್ಯಕ್ಷತೆ ವಹಿಸುವರು. ಕಾರ್ಯಾಗಾರಕ್ಕೆ ಪೂರ್ವ ನೋಂದಣಿ ಮಾಡಲು ಸಾಧ್ಯವಾಗದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಯುವ ದಿನ ಬೆಳಗ್ಗೆ 10ಕ್ಕೆ ಮುಂಚಿತವಾಗಿ ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಪತ್ರಿಕೋದ್ಯಮ, ಮಾಧ್ಯಮ ಕ್ಷೇತ್ರದಲ್ಲಿನ ವೃತ್ತಿ ಸಆಧ್ಯತೆಗಳು ಇತ್ಯಾದಿ ವಿಷಯಗಳ ಕುರಿತು ಪ್ರಮುಖ ಪತ್ರಕರ್ತರು ತರಗತಿ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.