ಪೇಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮೂರು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಭದ್ರತಾ ಪಡೆಗಳು 11 ಭಯೋತ್ಪಾದಕರನ್ನು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದರು.
ಡಿಸೆಂಬರ್ 17 ಮತ್ತು 18ರಂದು ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪಾಕಿಸ್ತಾನದ ಸಶಸ್ತ್ರ ಪಡೆ ಮಾಧ್ಯಮಗಳಿಗೆ ಮಾಹಿತಿ ನೀಡಿದೆ.
ಮೊದಲು ಟ್ಯಾಂಕ್ ಜಿಲ್ಲೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 7 ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು. ನಂತರ ಉತ್ತರ ವರಿಜಿಸ್ತಾನ್ ಹಾಗೂ ಮೊಹ್ಮಂಡ್ ಜಿಲ್ಲೆಗಳಲ್ಲಿ ತಲಾ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಯಿತು.
ಈ ಸ್ಥಳಗಳಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದೆ.