ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ವಿಶೇಷ ಕಾರ್ಯಾಚರಣೆ ನಡೆಸಿ ಬಾಂಗ್ಲಾದೇಶದ 13 ಜನ ಅಕ್ರಮ ವಲಸಿಗರನ್ನು ಬಂಧಿಸಿರುವುದಾಗಿ ತಿಳಿಸಿದೆ.
ನವಿ ಮುಂಬೈ, ಠಾಣೆ ಹಾಗೂ ಸೋಲಾಪುರದಲ್ಲಿ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಿದ್ದು, 7 ಪುರುಷರು ಹಾಗೂ 6 ಮಹಿಳೆಯರನ್ನು ಬಂಧಿಸಲಾಗಿದೆ.
ಬಂಧಿತರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು ಇವರು ಆಧಾರ್ ಕಾರ್ಡ್ ಸೇರಿದಂತೆ ನಕಲಿ ದಾಖಲೆಗಳನ್ನು ಪಡೆದುಕೊಂಡು ಅಕ್ರಮವಾಗಿ ನೆಲೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.