ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷವು ಇತ್ತೀಚಿಗೆ ಆಯೋಜಿಸಿದ್ದ ಪ್ರತಿಭಟನೆಗೆ ಸಂಬಂಧಿಸಿದ ಏಳು ಪ್ರಕರಣಗಳ ಕಾರಣಕ್ಕೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭಯೋತ್ಪಾದನಾ ನಿಗ್ರಹ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅದಿಯಾಲ ಜೈಲಿನಲ್ಲಿ ಬಂಧಿತರಾಗಿರುವ ಇಮ್ರಾನ್ ಖಾನ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಅಮ್ಜದ್ ಅಲಿ ಅವರು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸೇರಿದಂತೆ ಇತರೆ ಆರು ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.