ನವದೆಹಲಿ: '1,200 ಜನರಿಗೆ ಒಂದು ಮತಗಟ್ಟೆ ಸ್ಥಾಪಿಸಬೇಕು ಎಂಬ ನಿಯಮವಿದೆ. ಆದರೆ, ದೇಶದಲ್ಲಿ ಈಗ 1,500ಕ್ಕೂ ಹೆಚ್ಚು ಜನರಿಗೆ ಒಂದು ಮತಗಟ್ಟೆಯನ್ನು ಚುನಾವಣಾ ಆಯೋಗ ಸ್ಥಾಪಿಸುತ್ತದೆ. ಇದು ಕಳವಳಕಾರಿ' ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ಕುರಿತು ಪ್ರಮಾಣಪತ್ರವನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ಸೋಮವಾರ ಸೂಚಿಸಿದೆ.
'ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡಿದ ನಿರ್ಧಾರದ ಕುರಿತು ಸಂಕ್ಷಿಪ್ತವಾಗಿ ವಿವರಿಸಿ ಪ್ರಮಾಣಪತ್ರವನ್ನು ಸಲ್ಲಿಸಿ' ಎಂದು ಮುಖ್ಯ ನ್ಯಾಯಾಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ಹೇಳಿತು. ಮುಂದಿನ ವಿಚಾರಣೆಯನ್ನು 2025ರ ಜನವರಿ 27ಕ್ಕೆ ಮುಂದೂಡಲಾಯಿತು.