ಕಾಸರಗೋಡು: ಸಂಘಟನಾ ಶಕ್ತಿಯ ಮೂಲಕ ಭಾರತದಲ್ಲಿ ವಿಶ್ವಕರ್ಮ ಸಮಾಜದ ಹಕ್ಕುಗಳನ್ನು ಸಾಧಿಸಲು ಮತ್ತು ಕುಲದ ಸಾಂಪ್ರದಾಯಿಕ, ದೈವಿಕ ಕೆಲಸವನ್ನು ಎತ್ತಿಹಿಡಿಯಲು ಮತ್ತು ವಿಶ್ವಕರ್ಮ ಸಮುದಾಯವನ್ನು ಎಲ್ಲಾ ಹಂತಗಳಲ್ಲಿ ಮೇಲಕ್ಕೆತ್ತಲು. ರಾಷ್ಟ್ರೀಯ ವಿಶ್ವಕರ್ಮ ಫೆಡರೇಶನ್ (ಎನ್‍ವಿಎಫ್) 2010 ರಲ್ಲಿ ಕಾಸರಗೋಡಿನಲ್ಲಿ ಅಸ್ತಿತ್ವಕ್ಕೆ ಬಂದಿರುವುದಾಗಿ ಎನ್‍ವಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಸೀತಾರಾಮ್ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಿಶ್ವಕರ್ಮ ರಾಷ್ಟ್ರೀಯ ಚಳುವಳಿಯಾಗಿದ್ದು, ಸಂಸ್ಥೆಯ ಕಾರ್ಯಾಚರಣೆಯ ಉತ್ಕøಷ್ಟತೆ ಮತ್ತು ಸಮಯೋಚಿತ ಮಧ್ಯಸ್ಥಿಕೆಯೊಂದಿಗೆ ವಿಶ್ವಕರ್ಮ ಸಮುದಯದ ಅಗತ್ಯತೆಗಳು ಮತ್ತು ಹಕ್ಕುಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ಡಿ. 15ರಂದು ಕಾಸರಗೋಡು ನಗರಸಭಾಂಗಣದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಅಂದು ಬೆಳಗ್ಗೆ 10ಕ್ಕೆ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಸಮಾರಂಭ ಉದ್ಘಾಟಿಸಿ ಆಶೀರ್ವಚನ ನಿಡುವರು. ಸಮ್ಮೇಳನದಲ್ಲಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ನೇತಾರರು ಪಾಲ್ಗೊಳ್ಳುವರು. ಈ ಸಂದರ್ಭ ವಿಶ್ವಕರ್ಮ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೆರಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ರಾಘವನ್ ಕೊಳತ್ತೂರ್, ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ರಾಘವನ್ ದೊಡ್ಡುವಯಲ್, ರಾಷ್ಟ್ರೀಯ ಸಮಿತಿ ಸದಸ್ಯೆ ವಸಂತಿ ಜೆ. ಆಚಾರ್ಯ ಉಪಸ್ಥಿತರಿದ್ದರು.