ಮುಂಬೈ: ಮಹಾರಾಷ್ಟ್ರದ ಭಯೋತ್ಪಾದನೆ ನಿಗ್ರಹ ದಳವು(ಎಟಿಎಸ್) ರಾಜಧಾನಿ ಮುಂಬೈ ಸೇರಿ 4 ನಗರಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 17 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ.
ವಿಶೇಷ ಕಾರ್ಯಾಚರಣೆಯ ಭಾಗವಾಗಿ ಈ ಬಂಧನ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರ ನೆರವಿನೊಂದಿಗೆ ಎಟಿಎಸ್ ಮುಂಬೈ, ನವಿ ಮುಂಬೈ, ಠಾಣೆ ಮತ್ತು ನಾಸಿಕ್ ನಗರಗಳಲ್ಲಿ ಕಾರ್ಯಾಚರಣೆ ನಡೆಸಿತು ಎಂದು ಅವರು ಮಾಹಿತಿ ನೀಡಿದ್ದಾರೆ.
14 ಪುರುಷರು ಮತ್ತು ಮೂವರು ಮಹಿಳೆಯರನ್ನು ಒಳಗೊಂಡು ಕನಿಷ್ಠ 17 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಅನುಮತಿಯಿಲ್ಲದೆ ಭಾರತ ಪ್ರವೇಶಿಸಿದ ಮತ್ತು ಮಾನ್ಯ ದಾಖಲೆಗಳಿಲ್ಲದೆ ದೇಶದಲ್ಲಿ ನೆಲೆಸಿದ್ದ ಆರೋಪದಡಿ ಬಂಧಿಸಲಾಗಿದೆ ಅವರು ಹೇಳಿದ್ದಾರೆ.
ಆರೋಪಿಗಳ ವಿರುದ್ಧ ವಿದೇಶಿ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಹತ್ತು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.