ನವದೆಹಲಿ: 1988ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 104 ವರ್ಷ ವಯಸ್ಸಿನ ರಸಿಕ್ ಚಂದ್ರ ಮೊಂಡಲ್ ಎನ್ನುವ ವ್ಯಕ್ತಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರು ಇರುವ ವಿಭಾಗೀಯ ಪೀಠವು ಶುಕ್ರವಾರ ಜಾಮೀನು ನೀಡಿದೆ.
ವಯಸ್ಸಿಗೆ ಸಂಬಂಧಿಸಿದ ಕೆಲವು ಆರೋಗ್ಯ ಸಮಸ್ಯೆಗಳನ್ನು ಹೊರತುಪಡಿಸಿದರೆ ಮೊಂಡಲ್ ಸ್ಥಿರವಾಗಿ ಇದ್ದಾನೆ ಎಂದು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲರು ಪೀಠಕ್ಕೆ ತಿಳಿಸಿದರು. ಮೊಂಡಲ್‌ಗೆ ವಯಸ್ಸಾಗಿದೆ ಎಂಬುದನ್ನು ಪರಿಗಣಿಸಿದ ಪೀಠವು, ಆತನಿಗೆ ಮಧ್ಯಂತರ ಜಾಮೀನು ನೀಡಿತು.
1988ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಮೊಂಡಲ್‌ಗೆ 1994ರಲ್ಲಿ ಶಿಕ್ಷೆ ವಿಧಿಸಲಾಗಿದೆ. ಶಿಕ್ಷೆ ವಿಧಿಸಿದ್ದನ್ನು ಪ್ರಶ್ನಿಸಿ ಮೊಂಡಲ್ ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತ ಹೈಕೋರ್ಟ್ 2018ರಲ್ಲಿ ವಜಾಗೊಳಿಸಿತ್ತು. ನಂತರ ಈತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಸುಪ್ರೀಂ ಕೋರ್ಟ್ ಕೂಡ ಈತನ ಅರ್ಜಿಯನ್ನು ವಜಾಗೊಳಿಸಿದೆ.