ಜನವರಿ:
3: ಇರಾನ್‌ನ ರೆವಲ್ಯೂಷನರಿ ಗಾರ್ಡ್ಸ್‌ನ ಕಮಾಂಡರ್ ಮೇಜರ್ ಜನರಲ್ ಖಾಸಿಂ ಸುಲೇಮಾನಿ ಹತ್ಯೆಯ ನಾಲ್ಕನೇ ವರ್ಷದ ಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಸಂಭವಿಸಿದ ಎರಡು ಸ್ಫೋಟಗಳಲ್ಲಿ ಕನಿಷ್ಠ 103 ಮಂದಿ ಸಾವು
8: ಬಿಲ್ಕಿಸ್ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅವರ ಕುಟುಂಬದ ಏಳು ಮಂದಿಯನ್ನು ಹತ್ಯೆಗೈದ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಕ್ಷಮಾದಾನ ನೀಡಿದ್ದ ಗುಜರಾತ್ ಸರ್ಕಾರದ ಕ್ರಮವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್
9: ಅವಾಮಿ ಲೀಗ್ ಪಕ್ಷದ ನಾಯಕಿ ಶೇಖ್ ಹಸೀನಾ ಅವರು ನಾಲ್ಕನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ
10: ಖ್ಯಾತ ಹಿಂದೂಸ್ತಾನಿ ಗಾಯಕ ಉಸ್ತಾದ್ ರಾಶಿದ್ ಖಾನ್ (55) ನಿಧನ
18: ಬಸವಣ್ಣ ಅವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ರಾಜ್ಯ ಸರ್ಕಾರದಿಂದ ಘೋಷಣೆ
22: ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆ
23: ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ 'ಭಾರತ ರತ್ನ' (ಮರಣೋತ್ತರ) ಘೋಷಣೆ
28: ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ. ಈ ಮೂಲಕ 9ನೇ ಬಾರಿ ಮುಖ್ಯಮಂತ್ರಿಯಾಗಿ ದಾಖಲೆ ಬರೆದ ನಿತೀಶ್
ಫೆಬ್ರುವರಿ
1. ಜಾರ್ಖಂಡ್ ಮುಖ್ಯಮಂತ್ರಿಯಾಗಿ ಚಂಪೈ ಸೊರೇನ್ ಅಧಿಕಾರ ಸ್ವೀಕಾರ
3. ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿಗೆ ಭಾರತ ರತ್ನ ಘೋಷಣೆ
5. ನಾಸಾದದಿಂದ ಭೂಮಿಯನ್ನು ಹೋಲುವ ವಾಸಯೋಗ್ಯವಾದ ಗ್ರಹವೊಂದರ ಅನ್ವೇಷಣೆ
8. ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಹಾಗೂ ಅತಂತ್ರ ಫಲಿತಾಂಶ
9. ಮಾಜಿ ಪ್ರಧಾನಿಗಳಾದ ಪಿ.ವಿ ನರಸಿಂಹ ರಾವ್ ಮತ್ತು ಚೌಧರಿ ಚರಣ್ ಸಿಂಗ್ ಹಾಗೂ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್‌ಗೆ ಮರಣೋತ್ತರ ಭಾರತರತ್ನ ಘೋಷಣೆ
15. ಚುನಾವಣಾ ಬಾಂಡ್ ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು
17. ಸಂಸ್ಕೃತ ವಿದ್ವಾಂಸ ರಾಮಭದ್ರಚಾರ್ಯ ಮತ್ತು ಉರ್ದು ಕವಿ ಗುಲ್ಜರ್ ಅವರಿಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ
19: ಹೆಸರಾಂತ ಕಾದಂಬರಿಕಾರ, ಭಾಷಾತಜ್ಞ ಕೆ.ಟಿ.ಗಟ್ಟಿ (86) ಮಂಗಳೂರಿನಲ್ಲಿ ನಿಧನ
25: ಪ್ರಧಾನಿ ನರೇಂದ್ರ ಮೋದಿ ಗುಜರಾತ್‌ನ ಸ್ಕೂಬಾ ಡೈವಿಂಗ್ ಮೂಲಕ ರೋಚಕ ಅನುಭವ ಪಡೆದರು
26: ನಾಮಫಲಕದಲ್ಲಿ ಕಡ್ಡಾಯವಾಗಿ 60 ಶೇ ಕನ್ನಡ ಬಳಕೆಗೆ ಸಂಬಂಧಿಸಿದ ಮಸೂದೆಗೆ ರಾಜ್ಯಪಾಲರಿಂದ ಅಂಕಿತ
26: ಪ್ರಸಿದ್ಧ ಗಜಲ್ ಗಾಯಕ ಪಂಕಜ್ ಉದಾಸ್ ನಿಧನ
27: ಬಾಲಂಗೋಚಿಗಳಾದ ತನುಷ್ ಕೋಟ್ಯಾನ್ (ಅಜೇಯ 120) ಮತ್ತು ತುಷಾರ್ ದೇಶಪಾಂಡೆ (123) ಅವರು 10 ಮತ್ತು 11ನೇ ಕ್ರಮಾಂಕದಲ್ಲಿ ಶತಕಗಳನ್ನು ಬಾರಿಸಿ ದಾಖಲೆ ಪುಸ್ತಕಕ್ಕೆ ಸೇರಿದರು. 232 ರನ್ ಜೊತೆಯಾಟ
ಮಾರ್ಚ್
1: ವೈಟ್‌ಫೀಲ್ಡ್ ಸಮೀಪದ ಬ್ರೂಕ್‌ಫೀಲ್ಡ್‌ನಲ್ಲಿರುವ 'ದಿ ರಾಮೇಶ್ವರಂ ಕೆಫೆ' ಹೋಟೆಲ್‌ನಲ್ಲಿ ಟೈಮರ್ ಚಾಲಿತ ಕಚ್ಚಾ ಬಾಂಬ್ ಸ್ಫೋಟ, 10 ಮಂದಿಗೆ ಗಾಯ
11: ಪೌರತ್ವ ತಿದ್ದುಪಡಿ ಕಾಯ್ದೆ-2019ಕ್ಕೆ (ಸಿಎಎ) ಸಂಬಂಧಿಸಿದ ನಿಯಮಗಳನ್ನು ಅಧಿಸೂಚನೆ ಮೂಲಕ ಪ್ರಕಟಿಸಿದ ಕೇಂದ್ರ
12: ಬಿಜೆಪಿ ಮುಖಂಡ ನಾಯಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ
14: ಮಾಜಿ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖ್‌ಬೀರ್ ಸಂಧು ಚುನಾವಣಾ ಆಯುಕ್ತರಾಗಿ ನೇಮಕ
14:ಮುಂಬೈ ತಂಡಕ್ಕೆ 42ನೇ ಬಾರಿ ರಣಜಿ ಟ್ರೋಫಿ ಕಿರೀಟ. ಮುಂಬೈನಲ್ಲಿ ನಡೆದ ಫೈನಲ್‌ನಲ್ಲಿ ವಿದರ್ಭ ವಿರುದ್ಧ 169 ರನ್ ವಿಜಯ
16: ಲೋಕಸಭೆ ಹಾಗೂ ಆಂಧ್ರಪ್ರದೇಶ, ಒಡಿಶಾ, ಅರುಣಾಚಲಪ್ರದೇಶ ಹಾಗೂ ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ
18: ರಷ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ವ್ಲಾದಿಮರ್ ಪುಟಿನ್ ಅವರಿಂದ ಮತ್ತೆ ಗೆಲುವಿನ ನಗೆ
18: ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿ ಸಂಪೂರ್ಣ ಮಾಹಿತಿ ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್ ತಾಕೀತು
21: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ದೆಹಲಿಯ ಅಂದಿನ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಂಧನ
23: ಮಾಸ್ಕೊದ ಸಂಗೀತ ಕಾರ್ಯಕ್ರಮವೊಂದು ನಡೆಯಬೇಕಿದ್ದ ಕ್ರಾಕಸ್ ಸಿಟಿ ಹಾಲ್ ಸಭಾಂಗಣದ ಮೇಲೆ ನಡೆದ ದಾಳಿ, 133 ಮಂದಿ ಮೃತ
ಏಪ್ರಿಲ್
3: ಅಣ್ವಸ್ತ್ರ ಹೊತ್ತೊಯ್ಯುವ ಸಾಮರ್ಥ್ಯದ ಹೊಸ ಪೀಳಿಗೆಯ ಗುರಿ ನಿರ್ದೇಶಿತ ಕ್ಷಿಪಣಿ 'ಅಗ್ನಿ ಪ್ರೈಮ್' ಅನ್ನು ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು
14: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ನಿವಾಸದ ಮುಂದೆ ಬೈಕ್‌ನಲ್ಲಿ ಬಂದ ಇಬ್ಬರಿಂದ ಗುಂಡಿನ ದಾಳಿ
14: ಇಸ್ರೇಲ್ ಮೇಲೆ ಇರಾನ್ ಸೇನೆಯಿಂದ ಮೊದಲ ಬಾರಿ ನೇರ ದಾಳಿ. 30ಕ್ಕೂ ಹೆಚ್ಚು ಕ್ಷಿಪಣಿ, 170 ಡ್ರೋನ್, 120ಕ್ಕೂ ಹೆಚ್ಚು ಗುರಿ ನಿರ್ದೇಶಿತ ಕ್ಷಿಪಣಿಗಳಿಂದ ದಾಳಿ
16: ಛತ್ತೀಸಗಢದ ಕಾಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ 29 ನಕ್ಸಲರ ಹತ್ಯೆ
16: ಹೆಸರಾಂತ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (82) ಅವರು ಹೃದಯಾಘಾತದಿಂದ ತಮ್ಮ ಮನೆಯಲ್ಲಿ ನಿಧನ
19: ಲೋಕಸಭಾ ಚುನಾವಾಣೆಯ ಮೊದಲ ಹಂತದ ಮತದಾನ
22: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಕೆ.ಎಸ್.ಈಶ್ವರಪ್ಪ ಅವರನ್ನು ಪಕ್ಷದಿಂದ 6 ವರ್ಷಗಳಿಗೆ ಉಚ್ಚಾಟಿಸಿದ ಬಿಜೆಪಿ
26: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ; ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ
28: ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ.ರೇವಣ್ಣ ಮತ್ತು ಅವರ ಮಗ, ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು
29: ಕೇಂದ್ರದ ಮಾಜಿ ಸಚಿವ, ಚಾಮರಾಜ ನಗರದ ಸಂಸದ ವಿ. ಶ್ರೀನಿವಾಸ ಪ್ರಸಾದ್ (76) ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ
ಮೇ
4: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿ, ಅಕ್ರಮವಾಗಿ ಬಂಧನದಲ್ಲಿರಿಸಿ, ಹಲ್ಲೆ ನಡೆಸಿದ ಆರೋಪದ ಅಡಿಯಲ್ಲಿ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಬಂಧನ
10: ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ
13: ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ನಿಧನ
16: ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಹೇಳಿದ ಭಾರತ ಫುಟ್‌ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ. 150 ಅಂತರರಾಷ್ಟ್ರೀಯ ಪಂದ್ಯಗಳಿಂದ 94 ಗೋಲು ಗಳಿಕೆ
20: ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಇಲಾಖೆಗಳಲ್ಲಿ ನಡೆಸುವ ನೇಮಕಾತಿಯಲ್ಲಿ ಮೀಸಲಾತಿಯನ್ನು ಪಾಲಿಸುವಂತೆ ರಾಜ್ಯ ಸರ್ಕಾರದಿಂದ ಮಹತ್ವದ ಸೂಚನೆ
30: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆಗಿನ ಸಂಸದ (ಈಗ ಮಾಜಿ) ಪ್ರಜ್ವಲ್ ರೇವಣ್ಣ ಬಂಧನ
ಜೂನ್
2: ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 'ಹ್ಯಾಟ್ರಿಕ್' ಗೆಲುವು. ಸಿಕ್ಕಿಂನಲ್ಲಿ 'ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ' ಮರಳಿ ಅಧಿಕಾರಕ್ಕೆ
4: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೂರನೇ ಬಾರಿ ಅಧಿಕಾರಕ್ಕೆ. ಆಂಧ್ರ ಪ್ರದೇಶದಲ್ಲಿ ಟಿಡಿಪಿ ಜಯಭೇರಿ; ಒಡಿಶಾದಲ್ಲಿ ಬಿಜೆಪಿಗೆ ಜನಾದೇಶ
6: ಭಾರತ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್ ವಿಲ್ಮೋರ್ ಯಶಸ್ವಿಯಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ
8-24: 'ನೀಟ್' (ಯುಜಿ) ಪರೀಕ್ಷೆಯಲ್ಲಿ ನೀಡಲಾಗಿದ್ದ ಕೃಪಾಂಕಗಳ ಪರಿಶೀಲನೆಗೆ ನಾಲ್ಕು ಸದಸ್ಯರ ಸಮಿತಿ ರಚನೆ. ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆ ಉಂಟಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತು. ಅಕ್ರಮಗಳ ಕುರಿತು ಸಿಬಿಐನಲ್ಲಿ ಪ್ರಕರಣ ದಾಖಲು
22: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನ್ಯಾಯೋಚಿತವಾಗಿ ನಡೆಸಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚನೆ
ಜುಲೈ
2: ಉತ್ತರಪ್ರದೇಶದ ಹಾಥರಸ್ ಜಿಲ್ಲೆಯ ಪೂಲರಾಯ್ ಗ್ರಾಮದಲ್ಲಿ ನಡೆದ 'ಸತ್ಸಂಗ'ದ ವೇಳೆ ಕಾಲ್ತುಳಿತದಿಂದ 116 ಜನ ಸಾವು
5: ಬ್ರಿಟನ್ ನೂತನ ಪ್ರಧಾನಿಯಾಗಿ, ಲೇಬರ್ ಪಕ್ಷದ ನಾಯಕ ಕೀರ್ ಸ್ಟಾರ್ಮರ್ ಆಯ್ಕೆ. ಅಲ್ಲದೆ, ಬ್ರಿಟನ್ ಸಂಸತ್‌ಗೆ ಭಾರತೀಯ ಮೂಲದ 26 ಮಂದಿ ಆಯ್ಕೆ
9: ಪ್ರಧಾನಿ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ ಪುಟಿನ್ ಅವರಿಂದ ಪ್ರದಾನ
10: ವಿಚ್ಛೇದಿತ ಮುಸ್ಲಿಂ ಮಹಿಳೆಯರೂ ಜೀವನಾಂಶಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು
13: ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಮಾಸ್ ಮುಖ್ಯಸ್ಥ ಮೊಹಮ್ಮದ್ ಡೀಫ್ ಸಾವು- 90 ಮಂದಿ ಪ್ಯಾಲೆಸ್ಟೀನಿಯನ್ನರು ಬಲಿ
14: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ; ಅವರು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರು
25: ಗಣಿಗಾರಿಕೆಗೆ ಹಾಗೂ ಖನಿಜಗಳಿರುವ ಜಮೀನಿಗಳ ಮೇಲೆ ತೆರಿಗೆ ವಿಧಿಸಲು ರಾಜ್ಯಗಳು ಶಾಸನಬದ್ಧ ಅಧಿಕಾರ ಹೊಂದಿವೆ ಎಂದು ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು
28: ದೆಹಲಿಯಲ್ಲಿ ಕೋಚಿಂಗ್ ಸೆಂಟರ್‌ಗೆ ನೀರು ನುಗ್ಗಿ ಮೂವರು ಪರೀಕ್ಷಾ ಆಕಾಂಕ್ಷಿಗಳು ಸಾವು; ಕಟ್ಟಡ ಮಾಲೀಕ ಮತ್ತು ಸೆಂಟರ್ ನಿರ್ವಾಹಕ ಬಂಧನ
30: ಕೇರಳದ ವಯನಾಡ್ ಜಿಲ್ಲೆಯ ಮುಂಡಕೈ, ಚೂರಲ್‌ಮಲ, ಅಟ್ಟಮಲ ಹಾಗೂ ನೂಲ್ಪುಳ ಗ್ರಾಮಗಳಲ್ಲಿ ಭಾರಿ ಭೂಕುಸಿತ; ಕಂದಮ್ಮಗಳು ಸೇರಿದಂತೆ 123ಕ್ಕೂ ಹೆಚ್ಚು ಜನರು ಚಿರನಿದ್ರೆಗೆ
ಆಗಸ್ಟ್
1. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಒಳಮೀಸಲಾತಿ ಅನುಷ್ಠಾನಗೊಳಿಸುವ ಹಕ್ಕು ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ನಿಂದ ಐತಿಹಾಸಿಕ ತೀರ್ಪು
5. ಬಾಂಗ್ಲಾದೇಶದ ಪ್ರಧಾನಿ ನಿವಾಸದ ಮೇಲೆ ಮುತ್ತಿಗೆ. ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಶೇಖ್ ಹಸೀನಾ ಭಾರತಕ್ಕೆ ಆಗಮನ
9. ಕೋಲ್ಕತ್ತದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮತ್ತು ಕೊಲೆ
11. ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನೀರು ಪಾಲು
16. ಕಾಂತರ, ಕೆಜಿಎಫ್ ಸಿನಿಮಾ ಸೇರಿದಂತೆ ಕನ್ನಡಕ್ಕೆ 7 ರಾಷ್ಟೀಯ ಚಲನಚಿತ್ರ ಪ್ರಶಸ್ತಿ
24. ಏಕೀಕೃತ ಪಿಂಚಣಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ
26. ಪಾಕಿಸ್ತಾನದ 3 ಕಡೆ ಉಗ್ರರಿಂದ ದಾಳಿ 40 ಸಾವು
ಸೆಪ್ಟೆಂಬರ್
13: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಮನೆಯಲ್ಲಿ ನಡೆದ ಗಣಪತಿ ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ. ರಾಜಕೀಯ ವಿವಾದ
13: ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ (72) ನಿಧನ
13: ಎಲಾನ್ ಮಸ್ಕ್ ಅವರ 'ಸ್ಪೇಸ್‌ಎಕ್ಸ್' ಆಯೋಜಿಸಿದ್ದ 'ವಿಶ್ವದ ಮೊದಲ ಬಾಹ್ಯಾಕಾಶ ನಡಿಗೆ'ಯು ಯಶಸ್ವಿ
18: ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ. ಉತ್ತರಾಧಿಕಾರಿಯಾಗಿ ಸಚಿವೆ ಆತಿಶಿ ಆಯ್ಕೆ
20: 'ತಿರುಮಲ ದೇವಸ್ಥಾನದ ಪ್ರಸಾದ 'ಲಡ್ಡು' ತಯಾರಿಸಲು, ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು' ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೀಡಿದ ಹೇಳಿಕೆಯು ವಿವಾದ ಹುಟ್ಟುಹಾಕಿತು
23: ಶ್ರೀಲಂಕಾದಲ್ಲಿ ಜನರು ಸರ್ಕಾರದ ವಿರುದ್ಧ ದಂಗೆ ಎದ್ದ ಬಳಿಕ ನಡೆದ ಚುನಾವಣೆಯಲ್ಲಿ ಹೊಸ ಅಧ್ಯಕ್ಷರಾಗಿ ಮಾರ್ಕ್ಸ್‌ವಾದಿ ರಾಜಕಾರಣಿ ಅನುರ ಕುಮಾರ ಡಿಸ್ಸನಾಯಿಕೆ ಆಯ್ಕೆ
29: ಇರಾನ್ ಬೆಂಬಲಿತ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ಮುಖ್ಯಸ್ಥ ಸಯ್ಯದ್ ಹಸನ್ ನಸ್ರಲ್ಲಾ (64) ಅವರನ್ನು ಇಸ್ರೇಲ್ ಸೇನೆ ಹತ್ಯೆ ಮಾಡಿತು
ಅಕ್ಟೋಬರ್
8: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜಮ್ಮು ಕಾಶ್ಮೀರದಲ್ಲಿ 'ಇಂಡಿಯಾ' ಗುಂಪಿಗೆ ಗೆಲುವು
9: ದೇಶದ ಕೈಗಾರಿಕಾ ಉದ್ಯಮಕ್ಕೆ ಅಭಿವೃದ್ಧಿಯ ದಿಕ್ಸೂಚಿಯನ್ನು ನೀಡಿದ್ದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ನಿಧನ
12: ಎನ್‌ಸಿಪಿ (ಅಜಿತ್ ಪವಾರ್ ಬಣ) ನಾಯಕ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ (66) ಅವರನ್ನು ಗುಂಡಿಕ್ಕಿ ಹತ್ಯೆ
16: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ
17: ಹಮಾಸ್ ಬಂಡುಕೋರ ಸಂಘಟನೆಯ ಮುಖ್ಯಸ್ಥ ಯಹ್ಯಾ ಸಿನ್ವರ್‌ನನ್ನು (61) ಹತ್ಯೆಗೈದ ಇಸ್ರೇಲ್
22: ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಉರುಳಿ 8 ಸಾವು
24: ಜನ್ಮ ದಿನಾಂಕ ನಿರ್ಧರಿಸಲು ಆಧಾರ್ ಕಾರ್ಡ್ ಅಧಿಕೃತ ಪುರಾವೆಯಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
28: ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿಯ ಅಂಞೂಟ್ಟಂಬಲಂ ವೀರರ್‌ಕಾವ್ ದೈವಸ್ಥಾನದ ಉತ್ಸವದ ವೇಳೆ ಪಟಾಕಿ ಅವಘಡ ಸಂಭವಿಸಿ 150ಕ್ಕೂ ಹೆಚ್ಚು ಮಂದಿಗೆ ಗಾಯ, ನಾಲ್ವರು ಸಾವು
29: ಸ್ಪೇನ್ನಲ್ಲಿ ಅಕ್ಟೋಬರ್ 29 ಹಾಗೂ 30ರಂದು ಸಂಭವಿಸಿದ ಭೀಕರ ಪ್ರವಾಹದಲ್ಲಿ 231 ಮಂದಿ ಸಾವು
29: ಆಯುಷ್ಮಾನ್ ಭಾರತ-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಅಡಿಯಲ್ಲಿ ಆರೋಗ್ಯ ವಿಮಾ ರಕ್ಷೆಯನ್ನು 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾಗಿರುವವರಿಗೆ ಎಲ್ಲ ಹಿರಿಯ ನಾಗರಿಕರಿಗೆ ವಿಸ್ತರಣೆ ಮಾಡಲಾಯಿತು
ನವೆಂಬರ್
6: ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿಗೆ ಡೊನಾಲ್ಡ್ ಟ್ರಂಪ್ ಆಯ್ಕೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಭಾರತ ಮೂಲದ ಅಮೆರಿಕನ್ನರಾದ ಕಮಲಾ ಹ್ಯಾರಿಸ್‌ಗೆ ನಿರಾಸೆ
6: ರಸ್ತೆ ವಿಸ್ತರಣೆ ಮತ್ತು ಒತ್ತುವರಿ ತೆರವು ವೇಳೆ ಸಂಬಂಧಪಟ್ಟವರಿಗೆ ನೋಟಿಸ್ ನೀಡದೇ, ಕಟ್ಟಡಗಳನ್ನು 'ರಾತ್ರೋರಾತ್ರಿ ನೆಲಸಮಗೊಳಿಸುವಂತಿಲ್ಲ' ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
17: ಜನಾಂಗೀಯ ಸಂಘರ್ಷ ಪೀಡಿತ ಮಣಿಪುರ ರಾಜ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ. 3 ಜಿಲ್ಲೆಗಳಲ್ಲಿ ಬಿಗುವಿನ ವಾತಾವರಣ. ಸಚಿವರು, ಶಾಸಕರ ಮನೆಗೆ ಬೆಂಕಿ ಇಟ್ಟು ಆಕ್ರೋಶ
20: ಕರ್ನಾಟಕದ 'ನಂದಿನಿ' ಬ್ರ್ಯಾಂಡ್‌ನ ಉತ್ಪನ್ನಗಳ ವಹಿವಾಟು ದೇಶದ ರಾಜಧಾನಿ ನವದೆಹಲಿಗೂ ವಿಸ್ತರಣೆ
21: ಉದ್ಯಮಿ ಗೌತಮ್ ಅದಾನಿ ವಿರುದ್ಧ, ಭಾರತದಲ್ಲಿ ಸೌರಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗಳ ಗುತ್ತಿಗೆ ಪಡೆಯಲು ಅಧಿಕಾರಿಗಳಿಗೆ 25 ಕೋಟಿ ಡಾಲರ್ (ಅಂದಾಜು ₹2,100 ಕೋಟಿ) ಲಂಚ ನೀಡಿದ ಆರೋಪ. ಅದಾನಿ ಮತ್ತು ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಅಮೆರಿಕದ ಕೋರ್ಟ್
23: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಅಧಿಕಾರಕ್ಕೆ. ಜಾರ್ಖಂಡ್‌ನಲ್ಲಿ ಸರ್ಕಾರ ಉಳಿಸಿಕೊಂಡ ಜೆಎಂಎಂ
ಡಿಸೆಂಬರ್
1: ಭಾರತೀಯ ಅಮೆರಿಕನ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್
2: ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಬಂಡೆದ್ದಿರುವ ಬಣದ ಮುಂದಾಳು ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಶಿಸ್ತು ಸಮಿತಿಯಿಂದ ನೋಟಿಸ್
3: 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು (ಮುಡಾ) 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ' ಎಂಬ ಜಾರಿ ನಿರ್ದೇಶನಾಲಯದ ಮಾಹಿತಿ ಸೋರಿಕೆ
5: ಜೆಡಿಎಸ್ ಭದ್ರಕೋಟೆ ಎನಿಸಿರುವ ಹಾಸನದಲ್ಲಿ ಕೆಪಿಸಿಸಿ ಹಾಗೂ ಸ್ವಾಭಿಮಾನಿ ಒಕ್ಕೂಟದಿಂದ 'ಜನ ಕಲ್ಯಾಣ ಸಮಾವೇಶ'
5: ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ನಟ ಅಲ್ಲು ಅರ್ಜುನ್ ನಟನೆಯ 'ಪುಷ್ಪ 2: ದಿ ರೂಲ್' ಸಿನಿಮಾ ಪ್ರದರ್ಶನ ಉಂಟಾದ ನೂಕುನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮಹಿಳೆ ಸಾವು. ಘಟನೆಗೆ ಸಂಬಂಧಿಸಿ, ಅಲ್ಲು ಅರ್ಜುನ್ ವಿರುದ್ದ ಪ್ರಕರಣ ದಾಖಲು
6: ಯಾದಗಿರಿ ಜಿಲ್ಲೆಯ ಮುದ್ನಾಳ್, ಚಿತ್ರದುರ್ಗ ಜಿಲ್ಲೆಯ ಕುಂಚಿಗಾನಲ್ ಗ್ರಾಮ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಈಳರ್ಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
8: ಸಿರಿಯಾ ಸರ್ಕಾರವು ಪತನ. ಅಧ್ಯಕ್ಷ ಬಶರ್ ಅಸಾದ್ ಕುಟುಂಬದ ಐದು ದಶಕಗಳ ಆಡಳಿತ ಕೊನೆ
9: ವಕ್ಫ್ ಆಸ್ತಿ ವಿಚಾರ ವಿಧಾನಮಂಡಲ ಅಧಿವೇಶನದ ಮೊದಲ ದಿನವೇ ವಿಧಾನಪರಿಷತ್‌ನಲ್ಲಿ ಪ್ರಸ್ತಾಪ. ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಸದಸ್ಯರ ನಡುವೆ ವಾದ- ಪ್ರತಿವಾದ, ಕಾವೇರಿದ ವಾಕ್ಸಮರ
10: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (93) ನಿಧನ
10: ಪಂಚಮಸಾಲಿ ಸಮಾಜದ ಸದಸ್ಯರು 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ನಡೆಸಿದ ಹೋರಾಟ ಹಿಂಸಾರೂಪ ಪಡೆಯಿತು. ರಾಷ್ಟ್ರೀಯ ಹೆದ್ದಾರಿ ಮೇಲೆ ಪೊಲೀಸರು ಹಾಗೂ ಹೋರಾಟಗಾರರ ಮಧ್ಯೆ ಘರ್ಷಣೆ ಉಂಟಾಯಿತು. ಲಾಠಿ ಏಟು, ಕಲ್ಲು ತೂರಾಟದಿಂದ 30ಕ್ಕೂ ಹೆಚ್ಚು ಜನ ಗಾಯ
10: ರಾಜ್ಯಸಭೆಯ ಸಭಾಪತಿಯೂ ಆಗಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು, ಸದನವನ್ನು ಪಕ್ಷಪಾತಿಯಾಗಿ ನಡೆಸುತ್ತಿರುವ ಆರೋಪದ ಅಡಿಯಲ್ಲಿ ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳಿಂದ ನೋಟಿಸ್
10: ಪರಿಸರವಾದಿ ಮಾಧವ ಗಾಡ್ಗೀಳ್ ಅವರು ವಿಶ್ವಸಂಸ್ಥೆಯ 'ಚಾಂಪಿಯನ್ಸ್ ಆಫ್ ದಿ ಅರ್ತ್' ವಾರ್ಷಿಕ ಪ್ರಶಸ್ತಿಗೆ ಆಯ್ಕೆ
12: ಧಾರ್ಮಿಕ ಸ್ಥಳಗಳನ್ನು, ಅದರಲ್ಲೂ ಮುಖ್ಯವಾಗಿ ಮಸೀದಿಗಳು ಹಾಗೂ ದರ್ಗಾಗಳನ್ನು, ತಮ್ಮ ವಶಕ್ಕೆ ತೆಗೆದುಕೊಳ್ಳುವ ಕೋರಿಕೆ ಇರುವ ಹೊಸ ಅರ್ಜಿಗಳನ್ನು ದೇಶದ ನ್ಯಾಯಾಲಯಗಳು ಮುಂದಿನ ಸೂಚನೆಯವರೆಗೆ ಕೈಗೆತ್ತಿಕೊಳ್ಳುವಂತೆ ಇಲ್ಲ ಎಂದು ಸುಪ್ರೀಂ ಕೋರ್ಟ್‌ನಿಂದ ನಿರ್ದೇಶನ
15: ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾರತ್‌ಹಳ್ಳಿ ಠಾಣೆ ಪೊಲೀಸರಿಂದ ಅತುಲ್ ಅವರ ಪತ್ನಿ ನಿಖಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ ಹಾಗೂ ಸಹೋದರ ಅನುರಾಗ್ ಸಿಂಘಾನಿಯಾ ಬಂಧನ
16: ವಿಶ್ವವಿಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ (73) ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದ ಆಸ್ಪತ್ರೆಯಲ್ಲಿ ನಿಧನ
16: ಗಿಡಗಳ ಆರೈಕೆ ಮೂಲಕ ಪ್ರಸಿದ್ಧಿ ಪಡೆದು, ಅದೇ ಕಾರಣಕ್ಕೆ 'ಪದ್ಮಶ್ರೀ' ಪ್ರಶಸ್ತಿಗೆ ಭಾಜನರಾಗಿದ್ದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ತುಳಸಿ ಗೌಡ (80) ನಿಧನ
18: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಆಡಿದ ಮಾತುಗಳು ಭಾರಿ ಕೋಲಾಹಲಕ್ಕೆ ಕಾರಣವಾದವು. ಶಾ ಕ್ಷಮಾಪಣೆಗೆ ಮತ್ತು ರಾಜೀನಾಮೆಗೆ ವಿಪಕ್ಷಗಳ ಒತ್ತಾಯ. ದೇಶದಾದ್ಯಂತ ಪ್ರತಿಭಟನೆ
18: ಹಿರಿಯ ಭಾಷಾ ವಿದ್ವಾಂಸ ಹಾಗೂ ಸಂಶೋಧಕ ಪ್ರೊ.ಕೆ.ವಿ.ನಾರಾಯಣ ಅವರ 'ನುಡಿಗಳ ಅಳಿವು' ಕೃತಿಯು ಕೇಂದ್ರ ಸಾಹಿತ್ಯ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆ
19: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿ, ನಿಂದಿಸಿದ ಪ್ರಕರಣದಲ್ಲಿ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ವಶಕ್ಕೆ ಪಡೆದರು. ಕಲಾಪ ಮುಂದೂಡಿದ ವೇಳೆ ರವಿ ಅವರು ಅವಾಚ್ಯ ಪದ ಬಳಸಿದರು ಎನ್ನಲಾಗಿದೆ
20: ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನದ ಅಧ್ಯಕ್ಷ ಗೊ.ರು.ಚನ್ನಬಸಪ್ಪ ವಿಧ್ಯುಕ್ತ ಚಾಲನೆ
23: ಹೊಸ ಅಲೆಯ ಸಿನಿಮಾ ಚಳವಳಿಗೆ ನಾಂದಿ ಹಾಡಿದ್ದ ಚಲನಚಿತ್ರ ನಿರ್ದೇಶಕ ಶ್ಯಾಮ್ ಬೆನಗಲ್ (90) ನಿಧನ
26: ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ನಿಧನ