ಲಾಹೋರ್: ಸಾಮಾಜಿಕ ಜಾಲತಾಣಗಳಲ್ಲಿ ಸೇನೆ ವಿರುದ್ಧ ಅಪಪ್ರಚಾರದ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದ ಆರೋಪದಡಿ 22 ಮಂದಿಯನ್ನು ಬಂಧಿಸಿರುವ ಅಧಿಕಾರಿಗಳು, ಇತರ 150 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಧಿತರ ಪೈಕಿ ಬಹುತೇಕರು, ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷಕ್ಕೆ ಸೇರಿದವರಾಗಿದ್ದಾರೆ ಎನ್ನಲಾಗಿದೆ.
ನವೆಂಬರ್ 26ರಂದು ಇಸ್ಲಾಮಾಬಾದ್‌ನಲ್ಲಿ ನಡೆದಿದ್ದ ಪಕ್ಷದ ಕಾರ್ಯಕರ್ತರ ಹತ್ಯೆ ವಿಚಾರವಾಗಿ ಪಿಟಿಐ ಕಾರ್ಯಕರ್ತರು ಅಪಪ್ರಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಲಾಗಿದೆ.
'ಪಂಜಾಬ್ ಪ್ರಾಂತ್ಯದಲ್ಲಿ ಸಂಸ್ಥೆಯು 117 ದಾಳಿಗಳನ್ನು ನಡೆಸಿ, ಅಪಪ್ರಚಾರದಲ್ಲಿ ತೊಡಗಿದ್ದ ಶಂಕೆ ಮೇಲೆ 22 ಜನರನ್ನು ಬಂಧಿಸಿದೆ' ಎಂದು ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್‌ಐಎ) ಮುಖ್ಯಸ್ಥರು ತಿಳಿಸಿದ್ದಾರೆ.