ನವದೆಹಲಿ: ತೀವ್ರ ಚರ್ಚೆಯ ಬಳಿಕ 'ಒಂದು ದೇಶ, ಒಂದು ಚುನಾವಣೆ' ಮಸೂದೆಯು ಲೋಕಸಭೆಯಲ್ಲಿ ಮಂಗಳವಾರ ಮಂಡನೆಯಾಯಿತು.
ಮಸೂದೆಗೆ ವಿರೋಧ ವ್ಯಕ್ತಪಡಿಸಿರುವ ವಿಪಕ್ಷ ನಾಯಕರು ಇದು ಸಂವಿಧಾನವನ್ನು ಬುಡಮೇಲು ಮಾಡುವ ಮಸೂದೆ ಎಂದು ವಾಗ್ದಾಳಿ ನಡೆಸಿದರು.
ಬಳಿಕ ಮಸೂದೆಯ ಒಪ್ಪಿಗೆ ಪಡೆಯಲು ಮಂತಯಂತ್ರದ ಮೂಲಕ ನಡೆದ ಮತ ಚಲಾವಣೆ ಪ್ರಕ್ರಿಯೆಯಲ್ಲಿ 269 ಸದಸ್ಯರು ಮಸೂದೆಯ ಪರವಾಗಿ ಹಾಗೂ 198 ಸದಸ್ಯರು ವಿರೋಧವಾಗಿ ಮತ ಹಾಕಿದ್ದಾರೆ.
ಹೊಸ ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ವಿದ್ಯುನ್ಮಾನ ಮತಯಂತ್ರವನ್ನು ಬಳಸಲಾಯಿತು. ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಯಿತು.