HEALTH TIPS

2,988 ಔಷಧಿಗಳಲ್ಲಿ ಗುಣಮಟ್ಟವಿಲ್ಲ; 282 ಔಷಧಿಗಳು ನಕಲಿ: ಸಚಿವ

ನವದೆಹಲಿ: ದೇಶದಲ್ಲಿ ಮಾರಾಟವಾಗುತ್ತಿರುವ 2,988 ಔಷಧ ಮಾದರಿಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಮತ್ತು 282 ಔಷಧಿಗಳು ಕಲಬೆರಕೆ ಅಥವಾ ನಕಲಿಯಾಗಿರುವುದು ಪರೀಕ್ಷೆಯಲ್ಲಿ ಕಂಡುಬಂದಿದೆ ಎಂದು ಆರೋಗ್ಯ ಸಚಿವರು ಮಂಗಳವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

2023ರ ಏಪ್ರಿಲ್‌ನಿಂದ 2024ರ ಮಾರ್ಚ್‌ವರೆಗಿನ ಅವಧಿಯಲ್ಲಿ 1,06,150 ಔಷಧ ಮಾದರಿಗಳನ್ನು ಪರೀಕ್ಷಿಸಲಾಗಿದೆ.

ನಕಲಿ ಅಥವಾ ಕಲಬೆರಕೆ ಔಷಧಗಳ ತಯಾರಿಕೆ, ಮಾರಾಟ ಮತ್ತು ವಿತರಣೆಗಾಗಿ 604 ಪ್ರಕರಣಗಳಲ್ಲಿ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ನಕಲಿ, ಕಲಬೆರಕೆ ಹಾಗೂ ಪ್ರಮಾಣಿತವಲ್ಲದ ಔಷಧಗಳ ಮಾರಾಟ ತಡೆಯುವ ಸಲುವಾಗಿ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ರಾಜ್ಯ ಔಷಧ ನಿಯಂತ್ರಕರೊಂದಿಗೆ 2022ರ ಡಿಸೆಂಬರ್‌ನಿಂದ ಔಷಧ ತಯಾರಿಕಾ ಸಂಸ್ಥೆಗಳ ಅಪಾಯ-ಆಧಾರಿತ ತಪಾಸಣೆಯನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries