HEALTH TIPS

ತಿರುಮಲದಿಂದ ವಾಪಸ್‌ ಬರುವಾಗ ಅಪಘಾತ; 2 ವರ್ಷದ ಮಗು ಸೇರಿ ನಾಲ್ವರು ಸಾವು

ಹೈದರಾಬಾದ್‌: ನಿಂತಿದ್ದ ಟ್ರಕ್‌ಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೋಡಿಕೊಂಡ ಸಿರಾದ ರಾಷ್ಟ್ರೀಯ ಹೆದ್ದಾರಿ 544ರಲ್ಲಿ ಇಂದು (ಶನಿವಾರ) ಮುಂಜಾನೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಚಾಲಕನು ನಿದ್ರೆಗೆ ಜಾರಿದ್ದರಿಂದಲೇ ಈ ಅಪಘಾತ ಸಂಭವಿಸಿದೆ'ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

13 ಮಂದಿ ಯಾತ್ರಾರ್ಥಿಗಳನ್ನು ಹೊತ್ತ ವಾಹನವು ತಿರುಮಲದಿಂದ ವಾಪಸ್‌ ಬರುವಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries