ನವದೆಹಲಿ: ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರಕ್ಕೆ ಮತ್ತು ಕೇಂದ್ರದ ಮಾಜಿ ಸಚಿವ ವಿ.ಕೆ. ಸಿಂಗ್ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ನೇಮಕ ಮಾಡಿದ್ದಾರೆ.
ಮಿಜೋರಾಂ ರಾಜ್ಯಪಾಲರಾಗಿದ್ದ ಡಾ.ಹರಿ ಬಾಬು ಕಂಬಂಪತಿ ಅವರನ್ನು ಒಡಿಶಾಕ್ಕೆ, ಬಿಹಾರದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳಕ್ಕೆ, ಕೇರಳದ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರದ ರಾಜ್ಯಪಾಲರಾಗಿ ವರ್ಗಾವಣೆ ಮಾಡಿದ್ದಾರೆ.
ಇದೇ ವೇಳೆ ಒಡಿಶಾದ ರಾಜ್ಯಪಾಲ ರಘುವರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ
ಅಂಗೀಕರಿಸಿದ್ದಾರೆ. 1984ರ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿದ್ದ ಭಲ್ಲಾ ಅವರು 2019ರ ಆಗಸ್ಟ್‌ನಲ್ಲಿ ಗೃಹಕಾರ್ಯದರ್ಶಿಯಾಗಿ ನೇಮಕವಾಗಿದ್ದರು.