ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಜೆಎಸ್‌ಡಬ್ಲ್ಯು ಎನರ್ಜಿಯ ಥರ್ಮಲ್ ಪವರ್ ಘಟಕದ ಸಂಗ್ರಹಣಾ ಟ್ಯಾಂಕ್‌ನಿಂದ ಬಂದ ಹೊಗೆಯಿಂದಾಗಿ 30 ಶಾಲಾ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿಗಳು ಜೈಗಡ ವಿದ್ಯಾ ಮಂದಿರ ಶಾಲೆಯವರಾಗಿದ್ದು, ಶಾಲೆಯಲ್ಲಿ ಒಟ್ಟು 250 ವಿದ್ಯಾರ್ಥಿಗಳಿದ್ದಾರೆ.
ಪವರ್ ಘಟಕದ ಟ್ಯಾಂಕ್ ಸ್ವಚ್ಚಗೊಳಿಸುವ ವೇಳೆ ಬಂದ ಹೊಗೆಯಿಂದಾಗಿ ಸುಮಾರು 30ಕ್ಕೂ ಹೆಚ್ಚು ಮಕ್ಕಳ ಕಣ್ಣಿನಲ್ಲಿ ತೊಂದರೆ ಕಾಣಿಸಿಕೊಂಡಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.