ಜೈಪುರ: ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ರಾಸಾಯನಿಕ ಸಾಗಿಸುತ್ತಿದ್ದ ಟ್ರಕ್‌ವೊಂದು ಇತರ ವಾಹನಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಏಳು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಹಲವು ಟ್ರಕ್‌ಗಳಿಗೆ ಬೆಂಕಿ ಆವರಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ ಎಂದು ಬಂಕ್ರೋಟಾದ ಎಸ್‌ಎಚ್‌ಒ ಮನೀಶ್ ಗುಪ್ತಾ 'ಪಿಟಿಐ"ಗೆ ತಿಳಿಸಿದರು.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ರಾಜಸ್ಥಾನ ಮುಖ್ಯಮಂತ್ರಿ ಸಿಎಂ ಭಜನ್‌ಲಾಲ್ ಶರ್ಮಾ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.