ಢಾಕಾ: ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಬಾಂಗ್ಲಾದೇಶದ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 3) ನಡೆಸಲಿದೆ.
ಮೆಟ್ರೋಪಾಲಿಟನ್ ಸೆಷನ್ಸ್ ನ್ಯಾಯಾಧೀಶ ಮೊಹಮ್ಮದ್ ಸೈಫುಲ್ ಇಸ್ಲಾಂ ಅವರು ಅರ್ಜಿಯ ವಿಚಾರಣೆ ನಡೆಸಲಿದ್ದಾರೆ ಎಂದು ಚಟ್ಟೋಗ್ರಾಮದ ಹೆಚ್ಚುವರಿ ಉಪ ಆಯುಕ್ತ ಮೊಫಿಜುರ್ ರೆಹಮಾನ್ ತಿಳಿಸಿದ್ದಾರೆ.
ವಿಚಾರಣೆಯ ದಿನಾಂಕವನ್ನು ಈಗಾಗಲೇ ನಿಗದಿಪಡಿಸಲಾಗಿದೆ. ಆದರೆ ವಕೀಲರು ಕೆಲಸಕ್ಕೆ ಗೈರಾದ ಕಾರಣ ಪ್ರಕಟಣೆ ವಿಳಂಬವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.