ಗುವಾಹಟಿ: ಅಸ್ಸಾಂನಲ್ಲಿ ನಡೆಸಲಾದ ಎರಡು ಪ್ರತ್ಯೇಕ ಶೋಧ ಕಾರ್ಯಾಚರಣೆಯಲ್ಲಿ ₹6 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ಶುಕ್ರವಾರ ರಾತ್ರಿ ಗುವಾಹಟಿ ನಗರದ ಪಲ್ಟನ್ ಬಜಾರ್ ಹೋಟೆಲ್‌ನಲ್ಲಿ ವಿಶೇಷ ಕಾರ್ಯಪಡೆ ಸಿಬ್ಬಂದಿಗಳು ಶೋಧ ಕಾರ್ಯಾಚರಣೆ ನಡೆಸಿದರು.
ಖಚಿತ ಮಾಹಿತಿ ಮೇರೆಗೆ ನಾಗಾಂವ್ ಪೊಲೀಸರು ನಡೆಸಿದ ಮತ್ತೊಂದು ಕಾರ್ಯಾಚರಣೆಯಲ್ಲಿ, ವಾಹನವೊಂದರ ಸೀಟಿನಲ್ಲಿ ಬಚ್ಚಿಟ್ಟಿದ್ದ ಸುಮಾರು ₹3.25 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದ್ದು, ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಶರ್ಮಾ ಪೋಸ್ಟ್ ಮಾಡಿದ್ದಾರೆ.