ಚಂಡೀಗಢ: ಹರಿಯಾಣದ ಮಾಜಿ ಮುಖ್ಯಮಂತ್ರಿ, ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ಚೌಟಾಲಾ ಇಂದು (ಶುಕ್ರವಾರ) ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು.
ಓಂ ಪ್ರಕಾಶ್ ಚೌಟಾಲಾ ಅವರು ಗುರುಗ್ರಾಮದ ಸ್ವಗೃಹದಲ್ಲಿ ಇಂದು ಹೃದಯ ಸ್ತಂಭನದಿಂದ ನಿಧನರಾದರು ಎಂದು ಪಕ್ಷದ ಮೂಲಗಳು ತಿಳಿಸಿವೆ.