ನವದೆಹಲಿ: ದೇಶದಾದ್ಯಂತ ಹೊಸದಾಗಿ 85 ಕೇಂದ್ರೀಯ ವಿದ್ಯಾಲಯಗಳನ್ನು ಆರಂಭಿಸಲು ಕೇಂದ್ರ ಸಂಪುಟ ಒಪ್ಪಿಗೆ ನೀಡಿದ ಕುರಿತು ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂತಸ ಹಂಚಿಕೊಂಡಿದ್ದಾರೆ.
'ನಮ್ಮ ಸರ್ಕಾರದ ಈ ಹೆಜ್ಜೆಯು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಉಪಕಾರಿಯಾಗಲಿದೆ.
ಜೊತೆಗೆ, ಇದರಿಂದಾಗಿ ಉದ್ಯೋಗಾವಕಾಶವು ಏರಿಕೆಯಾಗಲಿದೆ' ಎಂದು 'ಎಕ್ಸ್' ಖಾತೆಯಲ್ಲಿ ಬರೆದುಕೊಂಡಿದ್ದಾರೆ.
'ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಸಮಾಜದ ಎಲ್ಲ ವರ್ಗದ ಜನರಿಗೂ ಶಾಲಾ ಶಿಕ್ಷಣ ದೊರೆಯುವಂತೆ ಮಾಡಲು ಸರ್ಕಾರ ಬದ್ಧವಾಗಿದೆ' ಎಂದೂ ಹೇಳಿದ್ದಾರೆ.