ಪೆರ್ಲ: ಕೇರಳ ಗ್ರಾಮೀಣ ಬ್ಯಾಂಕ್ ಶೇಣಿ ಶಾಖೆಯು ಶೇಣಿಯ ಅಮೃತಾ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಳ್ಳಲಿದ್ದು ಡಿ.9ರಂದು ಬೆಳಗ್ಗೆ 9.30ಕ್ಕೆ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ. ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸುವರು. ಕೇರಳ ಗ್ರಾಮೀಣ ಬ್ಯಾಂಕ್ ಜನರಲ್ ಮ್ಯಾನೇಜರ್ ಚಿಂದಂ ರಮೇಶ್ ಅಧ್ಯಕ್ಷತೆ ವಹಿಸುವರು. ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ ಜೆ.ಎಸ್., ಬ್ಯಾಂಕ್ ನ ಕಾಸರಗೋಡು ಪ್ರಾದೇಶಿಕ ವ್ಯವಸ್ಥಾಪಕಿ ಶ್ರೀಲತಾ ವರ್ಮಾಸಿ. ಮತ್ತಿತರರು ಉಪಸ್ಥಿತರಿರುವರು.