ವಾಷಿಂಗ್ಟನ್: ಪಾಕಿಸ್ತಾನ ಅಭಿವೃದ್ಧಿಪಡಿಸುತ್ತಿರುವ ಅತ್ಯಾಧುನಿಕ ಕ್ಷಿಪಣಿ ತಂತ್ರಜ್ಞಾನ ಯೋಜನೆ ಬಗ್ಗೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ.
ಈ ಯೋಜನೆಯು ಯಶಸ್ವಿಯಾದರೆ, ಬ್ಯಾಲಿಸ್ಟಿಕ್ ಕ್ಷಿಪಣಿಗಳು ದಕ್ಷಿಣ ಏಷ್ಯಾದ ಆಚೆಗೂ ದಾಳಿ ನಡೆಸುವ ಸಾಮರ್ಥ್ಯವನ್ನು ಹೊಂದಲಿವೆ.
ಇದರಿಂದ ಅಮೆರಿಕಕ್ಕೂ ಬೆದರಿಕೆ ಒಡ್ಡಬಹುದಾಗಿದೆ ಎಂದಿದೆ.
ಕ್ಷಿಪಣಿ ಯೋಜನೆಯ ಜವಾಬ್ದಾರಿಯನ್ನು ಹೊಂದಿರುವ ಇಸ್ಲಾಮಾಬಾದ್ ಮೂಲದ ರಾಷ್ಟ್ರೀಯ ಅಭಿವೃದ್ಧಿ ನಿಗಮವು ಅವಶ್ಯಕ ವಸ್ತುಗಳ ಸ್ವಾಧೀನಕ್ಕೆ ಮುಂದಾಗಿದೆ. ಇದರಿಂದಾಗಿ ಕೆಲವು ಸಂಸ್ಥೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಅಮೆರಿಕದ ಪ್ರಧಾನ ಉಪರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಫೈನರ್ ತಿಳಿಸಿದ್ದಾರೆ.
ಪಾಕಿಸ್ತಾನದ ಬ್ಯಾಲಿಸ್ಟಿಕ್ ಕ್ಷಿಪಣಿ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ಅಭಿವೃದ್ಧಿ ನಿಗಮ ಸೇರಿದಂತೆ ನಾಲ್ಕು ಸಂಸ್ಥೆಗಳ ಮೇಲೆ ಅಮೆರಿಕ ನಿರ್ಬಂಧ ವಿಧಿಸಿದ ಬಳಿಕ ಉನ್ನತ ಅಧಿಕಾರಿಯೊಬ್ಬರು ಈ ಹೇಳಿಕೆ ನೀಡಿದ್ದಾರೆ.