ಪೆರ್ಲ: ಡಿ..27ರವರೆಗೆ 7 ದಿನಗಳ ಕಾಲ ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆಯ ಎನ್ನೆಸ್ಸೆಸ್ ಶಿಬಿರ ಕಾಟುಕುಕೆಯ ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ.ಶಾಲೆ ಯಲ್ಲಿ “ದಾಸ ದಿಶಾ” ಎನ್ನೆಸ್ಸೆಸ್ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು. ಸ್ವರ್ಗ ಶಾಲೆಯ ಮುಖ್ಯ ಶಿಕ್ಷಕಿ ಗೀತಾಕುಮಾರಿ ಬಿ.ಧ್ವಜಾರೋಹಣ ನೆರವೇರಿಸಿ ಶಿಬಿರಕ್ಕೆ ಚಾಲನೆ ನೀಡಿದರು.
ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ ಜೆ.ಎಸ್. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಟುಕುಕ್ಕೆ ಶಾಲಾ ಸಂಚಾಲಕ ಮಿತ್ತೂರು ಪುರುμÉೂೀತ್ತಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ್ವರ್ಗ ವಾರ್ಡ್ ಸದಸ್ಯ ರಾಮಚಂದ್ರ ಎಂ., ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಎಸ್. ಗಾಂಭೀರ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಶ್ರೀ ಎ.ಕುಲಾಲ್, ಮಂಜೇಶ್ವರ ಬ್ಲಾಕ್ ಪಂ.ಸದಸ್ಯೆ ಬಟ್ಟು ಶೆಟ್ಟಿ, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಆಯಿಷಾ ಎ.ಎ., ಪಿ.ಟಿ.ಎ ಅಧ್ಯಕ್ಷ ಸುಧಾಕರ ಕಲ್ಲಗದ್ದೆ ಉಪಸ್ಥಿತರಿದ್ದು ಮಾತನಾಡಿದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಸಂಚಾಲಕ ಪದ್ಮನಾಭ ಶೆಟ್ಟಿ ಕಾಟುಕುಕ್ಕೆ ಸ್ವಾಗತಿಸಿ, ಶಿಕ್ಷಕ ರಾಜೇಶ್ ಸಿ.ಎಚ್ ವಂದಿಸಿದರು. . ಶಿಬಿರಾರ್ಥಿಗಳ ನೋಂದಣಿ ಬೆಳಗ್ಗೆ ನಡೆಯಿತು.