ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆದುಬರುತ್ತಿರುವ ಕೋಟಿ ಪಂಚಾಕ್ಷರಿ ಜಪಯಜ್ಞದ ಅಂಗವಾಗಿ ಶ್ರೀಚಕ್ರಪೂಜೆ ಬುಧವಾರ ನೆರವೇರಿತು. 19ರಂದು ಬೆಳಗ್ಗೆ ಶ್ರೀರುದ್ರಹೋಮ ಆರಂಭಗೊಳ್ಳಲಿದ್ದು, ಅಪರಾಹ್ನ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ರುದ್ರಹೋಮ ಪೂರ್ಣಾಹುತಿಯೊಂದಿಗೆ ಕೋಟಿ ಪಂಚಾಕ್ಷರಿ ಜಪಯಜ್ಞ ಸಂಪನ್ನಗೊಳ್ಳಲಿದೆ.
ಬುಧವಾರ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ದೇವಸ್ಥಾನಕ್ಕೆ ಭೇಟಿ ನೀಡಿ ಕೋಟಿ ಪಂಚಾಕ್ಷರಿ ಜಪಯಜ್ಞದಲ್ಲಿ ಪಾಲ್ಗೊಂಡು, ಭಕ್ತಾದಿಗಳನ್ನುದ್ದೇಶಿಸಿ ಆಶೀರ್ವಚನ ನೀಡಿದರು. ಕ್ಷೇತ್ರದ ಟ್ರಸ್ಟ್ ಬೊರ್ಡ್ ಅಧ್ಯಕ್ಷ ವಕೀಲ ಗೋವಿಂದನ್ ನಾಯರ್, ಕೋಟಿಪಂಚಾಕ್ಷರಿ ಜಪ ಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ, ಹೋಟೆಲ್ ಉದ್ಯಮಿ ರಾಮ್ ಪ್ರಸಾದ್, ಉಪಾಧ್ಯಕ್ಷ ಅರ್ಜುನ್ ತಾಯಲಂಗಾಡಿ, ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್ ಮೊದಲದವರು ಉಪಸ್ಥಿತರಿದ್ದರು.
ಡಿ. 16ರಂದು ಆರಂಭಗೊಂಡ ಕೋಟಿ ಪಂಚಾಕ್ಷರಿ ಜಪಯಜ್ಞದಲ್ಲಿ 90ಲಕ್ಷಕ್ಕೂ ಮಿಕ್ಕಿ ಸಮಿಧೆ ಸಮರ್ಪಿಸಲಾಗಿದೆ.