ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಲ್ಗಾಮ್ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಬುಧವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿದ್ದವು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಧ ಕಾರ್ಯಾಚರಣೆಯ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದರು. ಈ ವೇಳೆ ಎನ್‌ಕೌಂಟರ್‌ನಲ್ಲಿ ಐವರು ಉಗ್ರರು ಹತರಾಗಿದ್ದಾರೆ. ಅವರ ಮೃತದೇಹಗಳು ತೋಟದಲ್ಲಿ ಬಿದ್ದಿವೆ. ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.