ಸೋಲ್: ದೇಶದ ವಿರೋಧ ಪಕ್ಷಗಳು ಸಂಸತ್ ಅನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿವೆ ಎಂದು ಆರೋಪಿಸಿರುವ ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ದೇಶದಲ್ಲಿ ಮಂಗಳವಾರದಿಂದಲೇ 'ತುರ್ತು ಸೇನಾ ಆಡಳಿತ'ವನ್ನು ಜಾರಿಗೊಳಿಸಿದ್ದಾರೆ.
'ದೇಶ ವಿರೋಧಿ ಕೃತ್ಯದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಉತ್ತರ ಕೊರಿಯಾ ಯತ್ನಿಸುತ್ತಿದೆ' ಎಂದು ಈ ವೇಳೆ ಆರೋಪಿಸಿದ್ದಾರೆ.
'ದೇಶದ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರ ಸ್ಥಿತಿ ತಲುಪಿರುವುದರಿಂದ ಸಾಂವಿಧಾನಿಕ ಆದೇಶವನ್ನು ಪ್ರಕಟಿಸಲಾಗಿದೆ' ಎಂದು ದೇಶವನ್ನು ಉದ್ದೇಶಿಸಿ ಟೆಲಿವಿಷನ್ ಮೂಲಕ ತಿಳಿಸಿದ್ದಾರೆ.