ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರಿಗೆ ಜನವರಿ 4ರಿಂದ12ರ ನಡುವೆ ಆಸ್ಟ್ರಿಯಾ ಮತ್ತು ಬ್ರಿಟನ್‌ಗೆ ಪ್ರಯಾಣಿಸಲು ದೆಹಲಿಯ ನ್ಯಾಯಾಲಯ ಅನುಮತಿ ನೀಡಿದೆ.
ತಮ್ಮ ಕಂಪನಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮತ್ತು ಮಗಳನ್ನು ಭೇಟಿ ಮಾಡುವ ಉದ್ದೇಶಕ್ಕಾಗಿ ಕಾರ್ತಿ ಚಿದಂಬರಂ ಅವರಿಗೆ ವಿಯೆನ್ನಾ (ಆಸ್ಟ್ರಿಯಾ) ಮತ್ತು ಬ್ರಿಟನ್‌ಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.