ನವದೆಹಲಿ: ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಮಂಗಳವಾರದಿಂದ 6 ದಿನ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಅಮೆರಿಕಕ್ಕೆ ಭಾರತದ ಮೊದಲ ಉನ್ನತ ಮಟ್ಟದ ಭೇಟಿ ಇದಾಗಿರುತ್ತದೆ.
ಜೈಶಂಕರ್ ಅವರು ಅಮೆರಿಕ ವಿದೇಶಾಂಗ ಸಚಿವರೊಂದಿಗೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಪ್ರವಾಸದ ವೇಳೆ, ಅಮೆರಿಕದಲ್ಲಿನ ಭಾರತದ ಕಾನ್ಸುಲ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆಯನ್ನು ಜೈಶಂಕರ್ ಅವರು ವಹಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದೆ.