ನವದೆಹಲಿ: ಪುರುಷ ತನ್ನ ಸ್ವಂತ ಪತ್ನಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆಗಳನ್ನು ಅಪರಾಧೀಕರಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 74, 75, 76 ಮತ್ತು 85 ಹಾಗೂ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆ 2005 ಸಾಕಷ್ಟು ಸಮರ್ಪಕ ಪರಿಹಾರವನ್ನು ಒದಗಿಸುತ್ತವೆ ಎಂದು ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪುರುಷನು 18 ವರ್ಷಕ್ಕಿಂತ ಮೇಲ್ಪಟ್ಟ ತನ್ನ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಹೊಂದುವುದನ್ನು ದಂಡನಾರ್ಹ 'ಅತ್ಯಾಚಾರ' ಎಂದು ಪರಿಗಣಿಸಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರ ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.