ತಿರುವನಂತಪುರ: ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಅತಿ ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ 17,293 ಪ್ರಕರಣಗಳಿವೆ. ರಾಷ್ಟ್ರೀಯ ಹೆದ್ದಾರಿ 66ಕ್ಕೆ ಭೂಸ್ವಾಧೀನ ಪ್ರಕ್ರಿಯೆ ಶೇ.90ರಿಂದ 95ರಷ್ಟು ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್.ಎಚ್.66 ನಿರ್ಮಾಣಕ್ಕಾಗಿ ರಾಜ್ಯವು ಈಗಾಗಲೇ 5580 ಕೋಟಿ ರೂ.ಮಂಜೂರು ಮಾಡಲಾಗಿದೆ.
ಆರೂರು-ತುರವೂರು ಶೇ.41, ತುರವೂರು-ಪರವೂರು ಶೇ.27, ಪರವೂರು-ಕೋಟಂಕುಳಂಗರ ಶೇ.47, ಕದಂಬಟುಕೋಣಂ-ಕಜಕೂಟಂ ಶೇ.36ರಷ್ಟು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಪ್ರಗತಿಯಾಗಿದೆ. ಮಣ್ಣು ಲಭಿಸದ ಕಾರಣ ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ ಎಂದು ಗುತ್ತಿಗೆದಾರರು ದೂರುತ್ತಿದ್ದಾರೆ.