ಬೀಜಿಂಗ್: ಗಡಿ ವಿಚಾರದ ಮಾತುಕತೆಯಲ್ಲಿ ಪರಸ್ಪರ ನಂಬಿಕೆಯನ್ನು ಬಲಗೊಳಿಸಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಿದೆ ಎಂದು ಚೀನಾ ವಿದೇಶಾಂಗ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ.
ಮಾತುಕತೆ ಮತ್ತು ಸಂವಹನದ ಮೂಲಕ ಸಮಗ್ರತೆ ಮತ್ತು ಪ್ರಾಮಾಣಿಕತೆಯನ್ನು ದೃಢಪಡಿಸಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.
ಗಡಿ ವಿಚಾರಗಳನ್ನು ಚರ್ಚಿಸಲು ಈ ವಾರ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಮತ್ತು ಭಾರತದ ಭದ್ರತಾ ಸಲಹೆಗಾರ ಅಜಿತ್ ದೋಬಾಲ್ ಅವರು ಭೇಟಿಯಾಗುತ್ತಿದ್ದಾರೆ. ಈ ಮೂಲಕ ಕೆಲವು ವರ್ಷಗಳಿಂದ ಭಾರತ- ಚೀನಾ ಗಡಿಯಲ್ಲಿ ಉಂಟಾಗಿರುವ ಸಮಸ್ಯೆಯ ನಿವಾರಣೆಯ ಕುರಿತು ಚರ್ಚಿಸಲಿದ್ದಾರೆ ಎಂದು ಚೀನಾ ಸಚಿವಾಲಯದ ವಕ್ತಾರ ಲಿನ್ ಜಿಯಾನ್ ತಿಳಿಸಿದ್ದಾರೆ.
ಉಭಯ ನಾಯಕರ ಪರಸ್ಪರ ಒಮ್ಮತದೊಂದಿಗೆ, ಪರಸ್ಪರ ಗೌರವ ಮತ್ತು ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಚೀನಾ ಭಾರತದೊಂದಿಗೆ ಕೆಲಸ ಮಾಡಲು ಸಿದ್ಧವಿದೆ ಎಂದು ಚೀನಾ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.